ಚಿತ್ತಾಪುರ ಪಶು ಪಾಲನಾ ಇಲಾಖೆಯ ವಿವಿಧ ಯೋಜನೆಯ ಪರಿಹಾರ ಧನ ಮತ್ತು ಪರಿಕರಣಗಳು ವಿತರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಆರನೇ ರಾಷ್ಟ್ರೀಯ ಕಾಲುಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ವ್ಯಾಕ್ಸಿನ್ ಕ್ಯಾರಿಯರ್ ಮತ್ತು ಮೆಡಿಸಿನ್ ಕಿಟನ್ನು ಜಾನುವಾರು ಅಧಿಕಾರಿ ಮೃತ್ಯುಂಜಯಸ್ವಾಮಿ ಹಿರೇಮಠ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿತರಿಸುವ ಮೂಲಕ ಚಾಲನೆ ನೀಡಿದರು.
ಎಪಿಎಂಸಿ ಆವರಣದಲ್ಲಿ ವಿವಿಧ ಇಲಾಖೆಗಳ ಕೂಡಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯುತ್ ಚಾಲಿತ 2 ಎಚ್ ಪಿ ಮೇವು ಕತ್ತರಿಸುವ ಯಂತ್ರ, ಅನುಗ್ರಹ ಮತ್ತು ವಿಪತ್ತು ನಿಧಿ ಯೋಜನೆ ಪರಿಹಾರ ಧನದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಂಪ್ರಭು ಪಾಟೀಲ, ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಶಂಕರ ಕಣ್ಣಿ, ಡಾ.ಮಂಜುನಾಥ, ಡಾ.ಆಕಾಶ, ಪಶು ವೈದ್ಯಕೀಯ ಪರೀಕ್ಷಕರ ಸಂಘದ ಅಧ್ಯಕ್ಷ ಈಶ್ವರ ಮಡಿವಾಳ, ಜಾನುವಾರು ಅಧಿಕಾರಿ ಎಸ್.ಎಂ.ಶರಣಪ್ಪ ಸೇರಿದಂತೆ ತಾಲೂಕಿನ ಪಶುಪಾಲನಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.