ಭೀಮನಳ್ಳಿ ಗ್ರಾಮದಲ್ಲಿ ಜನ ಸುರಕ್ಷಾ ಶಿಬಿರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಜನಸಾಮಾನ್ಯರ ಆರ್ಥಿಕ ಭದ್ರತೆ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿನೋದ್ ಬೆನ್ನೆ ಹೇಳಿದರು.
ತಾಲೂಕಿನ ಭೀಮನಳ್ಳಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜನ ಸುರಕ್ಷಾ ಶಿಬಿರದಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಬ್ಯಾಂಕ್ ವತಿಯಿಂದ ಅನೇಕ ಯೋಜನೆಗಳಿವೆ ಹೀಗಾಗಿ ಗ್ರಾಮೀಣ ಜನರು ಈ ಯೋಜನೆಗಳ ಬಗ್ಗೆ ತಿಳಿದುಕೊಂಡು ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕೆನರಾ ಬ್ಯಾಂಕ್ ಎಎಫ್ಎಲ್ಸಿ ರೇಖಾ ತಳವಾರ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಅಟಲ್ ಪಿಂಚಣಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಈ ಎಲ್ಲಾ ಯೋಜನೆಗಳಡಿ ಪಿಎಂಎಸ್ಬಿವೈ 15, ಪಿಎಂಜೆಜೆಬಿವೈ 17, ಪಿಎಂಜೆಡಿವೈ 2 ಮತ್ತು ಎಪಿವೈ 7 ಸೇರಿದಂತೆ ಒಟ್ಟು 41 ಜನರು ನೋಂದಾಯಿಸಿಕೊಂಡರು.