ಚಿತ್ತಾಪುರದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ತಹಸೀಲ್ದಾರ ನಾಗಯ್ಯ ಹಿರೇಮಠ ಹೇಳಿದರು.
ಪಟ್ಟಣದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956 ರ ನವೆಂಬರ್ 1 ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ವಿಶೇಷ ಉಪನ್ಯಾಸಕರಾಗಿ ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಮಾತನಾಡಿ, 1956 ನವೆಂಬರ್ 1ರಂದು ಕನ್ನಡ ಭಾಷಿಗರಿಗಾಗಿ ಒಂದು ರಾಜ್ಯ ಉದಯವಾದ ಹಿನ್ನೆಲೆ ರಾಜ್ಯೋತ್ಸವ ಆಚರಣೆಯನ್ನು ಮಾಡಲಾಯಿತು. 1973 ನವೆಂಬರ್ 1ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಯಿತು ಹೀಗಾಗಿ ಕರ್ನಾಟಕ ರಾಜ್ಯೋತ್ಸವ ಕ್ಕೆ ತನ್ನದೇ ಆದ ಭವ್ಯ ಇಹಾಸವಿದೆ ಎಂದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಿಪಿಐ ಚಂದ್ರಶೇಖರ ತಿಗಡಿ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿರಾದಾರ, ಕಸಾಪ ಅಧ್ಯಕ್ಷ ವಿರೇಂದ್ರ ಕೊಲ್ಲೂರು,ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಶಿವಶರಣಪ್ಪ ಬಿರಾದಾರ, ಪಿಎಸ್ಐ ಶ್ರೀಶೈಲ್ ಅಂಬಾಟಿ ಅಧಿಕಾರಿಗಳಾದ ಸಂಜೀವಕುಮಾರ ಮಾನಕರ್, ಮಹ್ಮದ್ ಸಲೀಂ, ಬಾಲಕೃಷ್ಣ, ವಿಜಯಕುಮಾರ್ ಬಡಿಗೇರ್, ಪ್ರಕಾಶ್ ನೈಕೋಡಿ, ಆರತಿ ತುಪ್ಪದ್, ಚೇತನ್ ಗುರಿಕಾರ, ಶಂಕರಗೌಡ ಪಾಟೀಲ, ಅಶ್ವಥ್ ನಾರಾಯಣ, ಕರವೇ ಅಧ್ಯಕ್ಷರಾದ ನರಹರಿ ಕುಲಕರ್ಣಿ, ಚಂದರ್ ಚವ್ಹಾಣ, ಲಕ್ಷ್ಮೀಕಾಂತ ತಾಂಡೂರಕರ್ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ ಮರತೂರಕರ್ ಸ್ವಾಗತಿಸಿದರು, ನರಸಪ್ಪ ಚಿನ್ನಾಕಟ್ಟಿ ನಿರೂಪಿಸಿದರು. ಕಾರ್ಯಕ್ರಮದ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.