Oplus_0

ಪ್ರತಿಭಾ ಕಾರಂಜಿ ಕಾರ್ಯಕ್ರಮ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಪೂರಕ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾಗಿದೆ ಎಂದು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ ಹೇಳಿದರು.

ಪಟ್ಟಣದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚಿತ್ತಾಪುರ ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಚಿತ್ತಾಪುರ ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರುವ ಹಾಗೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ 2002ರಲ್ಲಿ ಸರಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ಹೇಳಿದರು.

ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಹೀಗಾಗಿ ಮಕ್ಕಳು ಯಾವುದಕ್ಕೂ ಹಿಂಜರಿಯಬಾರದು ಎಂದು ಕಿವಿಮಾತು ಹೇಳಿದರು.

ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಎಲ್ಲ ಮಕ್ಕಳೂ ಸಕ್ರೀಯವಾಗಿ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆಗಳನ್ನು ಹೊರಹಾಕಬೇಕು ಎಂದು ಹೇಳಿದರು.

ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ಕಾರ್ಯದರ್ಶಿ ಚಂದ್ರಶೇಖರ ಅವಂಟಿ, ಬಿ.ಆರ್.ಪಿ ಜಾಫರ್, ಪತ್ರಕರ್ತ ಕಾಶಿನಾಥ ಗುತ್ತೇದಾರ ಮಾತನಾಡಿದರು.

ಮುಖ್ಯಗುರುಗಳಾದ ಶರಣಬಸಪ್ಪ ಬೊಮ್ಮನಹಳ್ಳಿ ದೇವಿಂದ್ರಪ್ಪ ಇಮಡಾಪೂರ, ದೇವಿಂದ್ರಪ್ಪ ಶಹಾಬಾದಕರ್, ಸಂತೋಷ ಎಲ್.ಎಲ್.ಎಫ್, ಮಲ್ಲಿನಾಥ, ಶೈಲಜಾ ಹಲಸೂರು, ನರಸಪ್ಪ ಚಿನ್ನಾ ಕಟ್ಟಿ, ವಿಷ್ಣುವರ್ಧನ್ ರೆಡ್ಡಿ, ನಾಗರಾಜ ಕುಲಕರ್ಣಿ, ವಿರೇಶ ಕರದಾಳ ಸೇರಿದಂತೆ ಇತರರು ಇದ್ದರು.

ಸಿಆರ್ ಸಿ ಕವಿತಾ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀರಸಂಗಪ್ಪ ಸುಲೇಗಾಂವ ಸ್ವಾಗತಿಸಿದರು, ಮುಖ್ಯಗುರು ಆದಪ್ಪ ಬಗಲಿ ನಿರೂಪಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!