Oplus_0

ರೈತರ ಭೂಮಿಗಳು ವಕ್ಫ್ ಮಂಡಳಿ ಅತಿಕ್ರಮಣ ಮಾಡಿರುವುದನ್ನು ವಿರೋಧಿಸಿ ಚಿತ್ತಾಪುರದಲ್ಲಿ ಬಿಜೆಪಿಯಿಂದ ಮಾನವ ಸರಪಳಿ ನಡೆಸಿ ಬೃಹತ್ ಪ್ರತಿಭಟನೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ರಾಜ್ಯದ ಪುರಾತನ ದೇವಾಲಯ, ದಲಿತರ ಮತ್ತು ಹಿಂದೂ ರೈತರ ಜಮೀನು ಹಾಗೂ ಸ್ಮಶಾನ ಭೂಮಿಗಳು ವಕ್ಫ್ ಮಂಡಳಿ ಅತಿಕ್ರಮಣ ಮಾಡಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಚಿತ್ತಾಪುರ ಮಂಡಲ ನೇತೃತ್ವದಲ್ಲಿ ಸೋಮವಾರ ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಮಾನವ ಸರಪಳಿ ಮಾಡಿದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಿಜೆಪಿ ತಾಲೂಕು ಉಸ್ತುವಾರಿ ಶರಣಪ್ಪ ತಳವಾರ, ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್, ಒಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ ಅವಂಟಿ, ಹಿರಿಯ ಮುಖಂಡ ಸೋಮಶೇಖರ ಪಾಟೀಲ ಬೆಳಗುಂಪಾ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ವಕ್ಸ್. ಮಂಡಳಿಯ ಮೂಲಕ ರೈತರ ಹಾಗೂ ದಲಿತರ ಜಮೀನುಗಳನ್ನು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿ ಅಕ್ರಮವಾಗಿ ತನ್ನ ವಶಕ್ಕೆ ತೆಗೆದುಕೊಳ್ಳುತ್ತಿದ್ದ ವಕ್ಫ್ ಬೋರ್ಡ್ ಕ್ರಮ ಖಂಡನೀಯ ಕೂಡಲೇ ವಶಪಡಿಸೀಕೊಂಡ ರೈತರ ಜಮೀನುಗಳನ್ನು ವಾಪಸ್ ನೀಡಿ ಪಹಣಿಯಲ್ಲಿ ರೈತರ ಹೆಸರು ನಮೂದಿಸಿ ಇಲ್ಲದಿದ್ದರೆ ಉಗ್ರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೇಂದ್ರದ ನರೇಂದ ಮೋದಿ ನೇತೃತ್ವದ ಸರಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ ಸರಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ಎಂದರು.

ರಾಜ್ಯದ ವಿಜಯಪುರ ಜಿಲ್ಲೆ ಹೊನ್ನಾವಡದ ರೈತರ 1500 ಎಕರೆ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್‌ರಿಂದ ಪುಷ್ಠಿಕರಿಸಿ ನೋಟೀಸ್ ನೀಡಲಾಗಿದೆ. ಬೆಂಗಳೂರಿನ ವಿಧಾನ ಸೌಧವೂ ಸೇರಿದಂತೆ ಹಲವಾರು ಪ್ರಮುಖ ಆಸ್ತಿಗಳು ವಕ್ಫ್ ಗೆ ಸೇರಿದ್ದು ಎಂದು ಮುಸ್ಲಿಂ ನಾಯಕರು ಹೇಳಿಕೆಯಿತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಫ್ ಪ್ರತಿಪಾದಿಸುತ್ತಿದೆ. ಸವಣೂರು ತಾಲೂಕು ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಫ್ ಬೋರ್ಡ್ ಮುಂದಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯವೂ ವಕ್ಫ್ ಆಸ್ತಿ ಎಂದು ವಕ್ಫ್ ಹಕ್ಕು ಮಂಡಿಸಿದೆ. ಸರಕಾರಿ ಅಧೀನದಲ್ಲಿರುವ ಆಸ್ತಿಗಳನ್ನೇ ತನ್ನದೆಂದು ವಕ್ಫ್ ಬೋರ್ಡ್ ಹೇಳುತ್ತಿದೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ, ಗ್ರಾಮದ ಚಿಕ್ಕಮ್ಮ ಚಿಕ್ಕದೇವಿ ದೇಗುಲಕ್ಕೆ ಸೇರಿದ 6 ಗುಂಟೆ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿದೆ. ವಿಜಯಪುರ ಜಿಲ್ಲೆಯ 1500 ವರ್ಷ ಇತಿಹಾಸವಿರುವ ಸಿಂಧಗಿಯ ವಿರಕ್ತ ಮಠವೂ ವಕ್ಫ್ ಆಸ್ತಿ ಎಂದು ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. 2000 ವರ್ಷ ಇತಿಹಾಸವಿರುವ ಸೋಮನಾಥೇಶ್ವರ ದೇವಾಲಯವೂ ವಕ್ಫ್ ಆಸ್ತಿ ಎಂಬ ಹಕ್ಕು ಪ್ರತಿಪಾದನೆ ವಕ್ಫ್ ಮಂಡಳಿಯಿಂದ ಬರುತ್ತಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಪೂರ್ವಜರಿಂದ ಬಂದ ಜಮೀನುಗಳನ್ನು ಅನುಭವಿಸುತ್ತಿದ್ದ ರೈತರಿಗೂ ವಕ್ಫ್ ಆಸ್ತಿ ಎಂದು ತಹಸೀಲ್ದಾರ್‌ನಿಂದ ನೋಟೀಸ್ ನೀಡಲಾಗಿದೆ. ಕರ್ನಾಟಕದ ವಿಜಯಪುರ ಜಿಲ್ಲೆ ಹೊನ್ನಾವಡದ ರೈತರ 1500 ಎಕರೆ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್‌ರಿಂದ ಪುಷ್ಟಿಕರಿಸಿ ನೋಟೀಸ್ ನೀಡಿ ನಂತರ ಬಿಜೆಪಿಯ ಒತ್ತಾಯದಿಂದ ಹಿಂಪಡೆಯಲಾಗಿದೆ ಎಂದು ಹೇಳಿದರು.

ಇದೇ ತೆರನಾದ ನಿಲುವುಗಳನ್ನು ಮುಂದುವರೆಸಿದಲ್ಲಿ ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರಕಾರವೇ ನೇರವಾಗಿ ಹೊಣೆಯಾಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ ಯಾವುದೇ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಕೈಗೊಳ್ಳುವ ಮತ್ತು ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲಿಂ ವೋಲೈಕೆ ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಹಳೇ ಚಾಳಿಯನ್ನ ಕೈಬಿಡಬೇಕೆಂದು ಆಗ್ರಹಿಸಿದರು.

ಸಿದ್ದರಾಮಯ್ಯನವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿಯು ಈ ತಂತ್ರಗಾರಿಕೆಯನ್ನು ಒಪ್ಪುವುದಿಲ್ಲ ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರೆಯಲಿದೆ ಎಂದರು.

ಮತ್ತದೇ ರೀತಿಯ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಸರಕಾರ ಮುಂದುವರೆಸಿದಲ್ಲಿ ಇಡೀ ರಾಜ್ಯದಲ್ಲಿ ಜನತೆಯನ್ನು ಒಗ್ಗೂಡಿಸಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದರು.

ಬಿಜೆಪಿ ಮುಖಂಡರಾದ ಅಯ್ಯಪ್ಪ ರಾಮತೀರ್ಥ, ಗೋಪಾಲ ರಾಠೋಡ, ನಾಗರಾಜ ಭಂಕಲಗಿ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಮಾಲಗತ್ತಿ, ಶರಣಗೌಡ ಭೀಮನಳ್ಳಿ, ಬಾಲಾಜಿ ಬುರಬುರೆ, ಮಹೇಂದ್ರ ಕೋರಿ, ಪ್ರಭು ಗಂಗಾಣಿ, ರಮೇಶ್ ಬೋಮ್ಮನಳ್ಳಿ, ಶಾಮ್ ಮೇಧಾ, ಕೋಟೇಶ್ವರ ರೇಷ್ಮಿ, ಶ್ರೀಕಾಂತ್ ಸುಲೇಗಾಂವ್, ಶಿವರಾಮ್ ಚವ್ಹಾಣ, ಅಂಬಾದಾಸ್ ವಾಡಿ, ದೇವರಾಜ್ ತಳವಾರ, ನಾಗುಬಾಯಿ ಜಿತುರೆ, ಅಕ್ಕಮಹಾದೇವಿ, ಸುರೇಶ್ ಬೆನಕನಳ್ಳಿ, ಮಹೇಶ್ ಬಾಳಿ, ಶಾಂತಕುಮಾರ್ ಮಳಖೇಡ, ವಿಜಯಕುಮಾರ್ ಕಂಠಿ, ಬಸವರಾಜ ಹೂಗಾರ, ಯಮನಪ್ಪ ಬೋಸಗಿ, ಶಶಿ ಭಂಡಾರಿ, ಶರಣು ದಂಡೋತಿ, ಚಂದ್ರು ಕಾಳಗಿ, ಗುಂಡು ಮತ್ತಿಮುಡ್, ಕುನಾಲ್ ತುರೆ, ಮಹ್ಮದ್ ಯುನುಸ್, ಅಂಬರೀಷ್ ರಂಗನೂರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!