ಯಾದಗಿರಿ: ವಕ್ಫ್ ಬೋರ್ಡ್ ನಿಂದ ರೈತರಿಗೆ ಅನ್ಯಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ನಾಗಾವಿ ಎಕ್ಸಪ್ರೆಸ್

ಯಾದಗಿರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣದ ನೀತಿಯನ್ನು ಖಂಡಿಸಿ ಹಾಗೂ ರೈತರ ಜಮೀನುಗಳನ್ನು ವಶಪಡಿಸಿಕೊಂಡ ವಕ್ಫ್ ಬೋರ್ಡ್  ವಿರೋಧಿಸಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯಿಂದ ಕಾರ್ಯಕರ್ತರು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ವಕ್ಫ್ ಬೋರ್ಡ್ ರೈತರ ದಲಿತರ ಜಮೀನುಗಳನ್ನು ಕಬಳಿಸುತ್ತಾ ರೈತರಿಗೆ ಅನ್ಯಾಯ ಮಾಡುತ್ತಿದೆ, ರೈತರು ಈಗಾಗಲೇ ನೆರೆಹಾವಳಿಯಿಂದ ನೊಂದು ಬೆಂದು ಹೋಗಿದ್ದಾರೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಪರ ನಿಲ್ಲಬೇಕು ಒಂದು ವೇಳೆ ನಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಅಮೀನ್ ರೆಡ್ಡಿ ಯಾಳಗಿ, ಬಿಜೆಪಿ ಯುವ ಮುಖಂಡರಾದ ಮಹೇಶ್ ರೆಡ್ಡಿ ಮುದ್ನಾಳ್, ರಾಚನಗೌಡ ಮುದ್ನಾಳ, ರಾಜ್ಯ ಕಾರ್ಯದರ್ಶಿ ನಗರಸಭೆ ಅಧ್ಯಕ್ಷೆ ಕು. ಲಲಿತಾ ಅನಪೂರ್, ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಶರಣ ಭೂಪಾಲರೆಡ್ಡಿ ನಾಯ್ಕಲ್, ಮಾಜಿ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ್ ನಾದ್, ಜಿಲ್ಲಾ ವಕ್ತಾರರು ನಗರಸಭೆ ಸದಸ್ಯ ಹಣಮಂತ ಇಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ಮೇಲಪ್ಪ ಗುಳಗಿ, ಪರಶುರಾಮ್ ಕುರುಕುಂದಿ, ವೆಂಕಟರೆಡ್ಡಿ ಅಬ್ಬೆತುಮಕೂರ್, ನಗರಾಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರಸಭೆ ಸದಸ್ಯರಾದ ಪ್ರಭಾವತಿ ಕಲಾಲ್ ಅಂಬಯ್ಯ ಶಾಬಾದಿ, ವಕ್ತಾರ ಚಂದ್ರಶೇಖರ ಕಡೇಸೂರ ಸೇರಿದಂತೆ ಅನೇಕ ಮುಖಂಡರು ಇದ್ದರು.

“ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು”.-ಅಮೀನ್ ರೆಡ್ಡಿ ಯಾಳಗಿ ಬಿಜೆಪಿ ಜಿಲ್ಲಾಧ್ಯಕ್ಷರು, ಯಾದಗಿರಿ

Spread the love

Leave a Reply

Your email address will not be published. Required fields are marked *

error: Content is protected !!