Oplus_0

ಶಹಾಬಾದ ದಲಿತ ಹೋರಾಟಗಾರ ಡಾ. ಮಲ್ಲೇಶಿ ಸಜ್ಜನ್ ನಿಧನ

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಾಗೂ ಜೆ.ಪಿ ಕಾರ್ಖಾನೆಯ ಕಾರ್ಮಿಕ ಮುಖಂಡ, ಹೋರಾಟಗಾರ ಡಾ. ಮಲ್ಲೇಶಿ ಸಜ್ಜನ್ (73) ರವರು ಬುಧವಾರ ಬೆಳಗ್ಗೆ 10.30 ಕ್ಕೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.ಇವರಿಗೆ ಪತ್ನಿ, ಇಬ್ಬರು ಸುಪುತ್ರರು ಮತ್ತು ಮೂವರು ಸುಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು  ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯು ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಮಡ್ಡಿ ನಂ. 1 ರ ಹಳ್ಳದ ಹತ್ತಿರ ಇರುವ ಸಾರ್ವಜನಿಕ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಂತಾಪ: ದಲಿತ ಹಿರಿಯ ಮುಖಂಡ ಡಾ.ಮಲ್ಲೇಶ ಸಜ್ಜನ್ ನಿಧನಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ ಸಾಗರ ಹಾಗೂ ಹೆಣ್ಣೂರು ಶ್ರೀನಿವಾಸ, ಬಸವರಾಜ ಬೆಣ್ಣೂರಕರ್, ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ, ಜೆ.ಪಿ ಕಾರ್ಮಿಕರ ಸಂಘದ ಅಧ್ಯಕ್ಷ ಮಹ್ಮದ ಉಬೇದುಲ್ಲಾ, ಡಿ. ಡಿ ಓಣಿ, ಪೌರಾಯುಕ್ತ ಡಾ. ಗುರುಲಿಂಗಪ್ಪ, ಕದಸಂಸ ಜಿಲ್ಲಾ ಸಂಚಾಲಕ ಸುರೇಶ ಮೆಂಗನ್, ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳ, ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಅಧ್ಯಕ್ಷ ರಾಜೇಶ ಯನಗುಂಟಿಕರ, ಶರಣು ಪಗಲಾಪೂರ, ಡಾ. ಅಹ್ಮದ ಪಟೇಲ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!