ನ.13 ರಂದು ಕಲಬುರ್ಗಿ ಕೇಂದ್ರ ಕಾರಾಗೃಹದ ಸಂದರ್ಶಕರ ಮಂಡಳಿಯ ಸಭೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದ ಸಂದರ್ಶಕರ ಮಂಡಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಅಧ್ಯಕ್ಷರಾಗಿದ್ದು, ಮಾನ್ಯರು ಕಾರಾಗೃಹದ ಸಂದರ್ಶಕರ ಮಂಡಳಿಯ ಸಭೆಯನ್ನು ನ.13 ರಂದು ಸಂಜೆ 5 ಗಂಟೆಗೆ ಮುಖ್ಯ ಅಧೀಕ್ಷಕರು, ಕೇಂದ್ರ ಕಾರಾಗೃಹ ಕಲಬುರಗಿರವರ ಕಛೇರಿಯಲ್ಲಿ ಸಭೆಯನ್ನು ಕರೆಯಲು ಆದೇಶಿಸಿರುತ್ತಾರೆ ಎಂದು ಕೇಂದ್ರ ಕಾರಾಗೃಹ ಕಲಬುರಗಿ ಮುಖ್ಯ ಅಧೀಕ್ಷಕರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗುವ ಕಾರಾಗೃಹದ ಸಂದರ್ಶಕರ ಮಂಡಳಿಯ ಸಭೆಗೆ ಹಾಜರಾಗಿ ಸಭೆಯಲ್ಲಿ ತಮ್ಮ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಕಲಬುರ್ಗಿ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರು ಕೋರಿದ್ದಾರೆ.