ಚಿತ್ತಾಪುರ: ಎಸ್ಡಿಎಂಸಿ ಅಧ್ಯಕ್ಷರ ಮತ್ತು ಸದಸ್ಯರ ಪಾತ್ರ ಮತ್ತು ಅವರ ಕರ್ತವ್ಯಗಳ ಕುರಿತು ಒಂದು ದಿನದ ತರಬೇತಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ತಾಲೂಕು ಪಂಚಾಯಿತ್ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೊಮೆಂಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಲಬುರ್ಗಿ ಇವರ ಸಹಯೋಗದಲ್ಲಿ ಬುಧವಾರ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆ ಪೂರಕವಾದ ವಾತಾವರಣ ಸೃಷ್ಟಿಸಲು ಎಸ್ಡಿಎಂಸಿ ಅಧ್ಯಕ್ಷರ ಮತ್ತು ಸದಸ್ಯರ ಪಾತ್ರ ಮತ್ತು ಅವರ ಕರ್ತವ್ಯಗಳ ಕುರಿತು ಒಂದು ದಿನದ ತರಬೇತಿ ನಡೆಯಿತು.
ಈ ತರಬೇತಿಯಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೊಮೆಂಟ್ ವತಿಯಿಂದ ಕಾರ್ನಿರ್ವಹಿಸುತ್ತಿರುವಂತಹ 25 ಶಾಲೆಗಳಿಂದ ಒಟ್ಟು 98 ಎಸ್ಡಿಎಂಸಿ ಅಧ್ಯಕ್ಷರು ಸದಸ್ಯರು ಭಾಗವಹಿಸಿದ್ದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಿ.ಆರ್.ಸಿ ಜಾಫರ್ ಮತ್ತು ಅತಿಥಿಗಳಾಗಿ ಗಾಂಧಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಬ್ದುಲ್ ಸಲೀಂ, ಕರದಾಳ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಪಂಡೀತ್ ನೆಲೋಗಿ, ಎಸ್ಡಿಎಂಸಿ ಅಧ್ಯಕ್ಷ ಚಂದರ್ ಚವ್ಹಾಣ, ಸಂಪನ್ಮೂಲ ವ್ಯಕ್ತಿ ಮಹಾದೇವ ದೇವರ್, ಪತ್ರಕರ್ತ ಜಗದೇವ ಕುಂಬಾರ, ಸ್ವಾಮಿ ವಿವೇಕಾನಂದ ಯೂಥ್ ಮೊಮೆಂಟ್ ಸಂಸ್ಥೆಯ ಸಂತೋಷ್ ಎಂ.ಕೆ ಅಧ್ಯಕ್ಷತೆ ವಹಿಸಿದ್ದರು. ಸ್ವಾಮಿ ವಿವೇಕಾನಂದ ಯೂತ್ ಮೊಮೆಂಟ್ ಕಾರ್ಯಕ್ರಮ ವ್ಯವಸ್ಥಾಪಕರು, ಚಿತ್ತಾಪುರ ತಾಲೂಕಿನಲ್ಲಿ ಕಾರ್ಯನಿರ್ವಹಿಸುವಂತಹ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

