ಜನ್ಮದಿನ ಆಚರಿಸದಿರಲು ನಿರ್ಧಾರ: ಪ್ರಿಯಾಂಕ್ ಖರ್ಗೆ, ಬಡ ಜನರಿಗೆ, ಸಂಕಷ್ಟದಲ್ಲಿರುವ ಜನರಿಗೆ, ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮನವಿ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಹಲವು ವರ್ಷಗಳಿಂದ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಇದು ಎಲ್ಲರಿಗೂ ತಿಳಿದ ವಿಷಯವಾಗಿದ್ದು, ಅಂತೆಯೇ ಈ ಬಾರಿಯೂ ಕೂಡ ನ.22 ರಂದು ನನ್ನ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದೇನೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ಸಹ ನಿಮ್ಮ ಸಹಕಾರ, ಪ್ರೀತಿ ಹಾಗೂ ತಾಳ್ಮೆ ನನ್ನೊಂದಿಗೆ ಹೀಗೇ ಇರಲಿ ಎಂದು ಆಶಿಸುತ್ತೇನೆ.
ಈಗಾಗಲೇ ಅನೇಕ ಆತ್ಮೀಯರು ಹುಟ್ಟುಹಬ್ಬವನ್ನು ಆಚರಿಸಲು ತಯಾರಿ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ದಯಮಾಡಿ ಇಂತಹ ಆಚರಣೆಗಳಿಗೆ ನಿಮ್ಮ ಶ್ರಮ ಹಾಕಬಾರದು ಎಂದು ಕೇಳಿಕೊಳ್ಳುತ್ತೇನೆ, ನಿಮ್ಮ ಪ್ರೀತಿ, ಹಾರೈಕೆ, ಅಭಿಮಾನವೇ ನನಗೆ ಸಮ್ಮಾನ, ಸಂಭ್ರಮ.
ನೀವು ಮಾಡಲೇಬೇಕು ಎಂದು ನಿರ್ಧರಿಸಿದ್ದರೆ, ನಿಮ್ಮ ಪರಿಶ್ರಮವು ಬಡ ಜನರಿಗೆ, ಶೋಷಿತರಿಗೆ, ಸಂಕಷ್ಟದಲ್ಲಿರುವ ಜನರಿಗೆ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ರೀತಿಯಲ್ಲಿ ಇರಲಿ ಎಂದು ಕಳಕಳಿಯಿಂದ ವಿನಂತಿಸಿಕೊಂಡಿದ್ದಾರೆ.
ನಿಮ್ಮ ಪ್ರೀತಿ ಹಾಗೂ ಅಭಿಮಾನಕ್ಕೆ ನಾನು ಹಾಗೂ ನಮ್ಮ ಕುಟುಂಬ ಸದಾ ಚಿರಋಣಿಯಾಗಿರಲಿದೆ ಎಂದು ಸಚಿವರು ತಿಳಿಸಿದ್ದಾರೆ.