Oplus_0

ನ.22 ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಅನ್ನದಾಸೋಹ, ಬಡ ಹೆಣ್ಣು ಮಕ್ಕಳಿಗೆ ಸೀರೆ ವಿತರಣೆ, ದಲಿತ ಸಂಘಟನೆಗಳ ಹಿರಿಯ ಮುಖಂಡರಿಗೆ ಮತ್ತು ಪತ್ರಕರ್ತರಿಗೆ ಗೌರವ ಸನ್ಮಾನ ಕಾರ್ಯಕ್ರಮ: ಬೆಣ್ಣೂರಕರ್ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 46 ನೇ ಹುಟ್ಟು ಹಬ್ಬದ ಅಂಗವಾಗಿ ನ.22 ರಂದು 12 ಗಂಟೆಗೆ ಬುದ್ಧ ವಿಹಾರದಲ್ಲಿ ಅನ್ನದಾಸೋಹ, ಬಡ ಹೆಣ್ಣು ಮಕ್ಕಳಿಗೆ ಸೀರೆ ವಿತರಣೆ, ದಲಿತ ಸಂಘಟನೆಗಳ ಹಿರಿಯ ಮುಖಂಡರಿಗೆ ಮತ್ತು ಪತ್ರಕರ್ತರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್ಎಸ್ ಜಿಲ್ಲಾ ಸಂಚಾಲಕ, ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್ ತಿಳಿಸಿದ್ದಾರೆ.

ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು , ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಉದ್ಘಾಟಿಸುವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಜ್ಯೋತಿ ಬೆಳಗಿಸುವರು, ಮುಖ್ಯ ಅತಿಥಿಗಳಾಗಿ ಜಿಪಂ ಮಾಜಿ ಸದಸ್ಯ ಶಂಭುಲಿಂಗ ಗುಂಡಗುರ್ತಿ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ ಭೀಣಿ, ಉದ್ಯಮಿ ಹಸನ್ ಪಟೇಲ್, ಗುಂಡಗುರ್ತಿ ಗ್ರಾಮ ಪಂಚಯತ ಮಾಜಿ ಅಧ್ಯಕ್ಷ ಸುನೀಲ್ ದೊಡ್ಡಮನಿ, ಸಿಪಿಐ ಚಂದ್ರಶೇಖರ ತಿಗಡಿ, ಪುರಸಭೆ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಮುಕ್ತಾರ ಪಟೇಲ್, ಪಿಎಸ್ಐ ಶ್ರೀಶೈಲ್ ಅಂಬಾಟಿ, ಪುರಸಭೆ ಮಾಜಿ ಅಧ್ಯಕ್ಷ ಶಿವಕಾಂತ ಬೆಣ್ಣೂರಕರ್, ಉದ್ಯಮಿ ಶಿವರೆಡ್ಡಿ ಪಾಲಪ್, ಕಾಂಗ್ರೆಸ್ ಮುಖಂಡ ನಾಗಪ್ಪ ಕಲ್ಲಕ್, ಉದ್ಯಮಿ ನಾಗರಾಜ ಪರಂಡೆ, ದಲಿತ ಮುಖಂಡ ಶ್ರೀಕಾಂತ ಶಿಂದೆ, ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬುಳಕರ್, ತಾಲೂಕು ಸಂಚಾಲಕ ಲೋಹಿತ್ ಮುದಡಗಿ ಅವರು ಭಾಗವಹಿಸಲಿದ್ದಾರೆ.

ದಲಿತ ಸಂಘಟನೆಗಳ ಹಿರಿಯ ಮುಖಂಡರಿಗೆ ಗೌರವ ಸನ್ಮಾನ: ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ. ಸಾಗರ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ, ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುರೇಶ ಮೆಂಗನ್, ತಾಲೂಕ ಸಂಚಾಲಕ ದೇವಿಂದ್ರ ಕುಮಸಿ ಸೇರಿದಂತೆ ಸ್ಥಳೀಯ ಪತ್ರಕರ್ತರಿಗೆ ಗೌರವ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!