ಚಿತ್ತಾಪುರ ವಿದ್ಯಾರ್ಥಿ ವಸತಿ ನಿಲಯಗಳಿಗೆ ಅಪಾರ ಜಿಲ್ಲಾಧಿಕಾರಿ ಹುಣಸಗಿ ಭೇಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯಗಳಿಗೆ ಗುರುವಾರ ಅಪಾರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.
ವಸತಿ ನಿಲಯದಲ್ಲಿನ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ ಅವರು ಕೂಡಲೇ ಈ ಸಮಸ್ಯೆಗಳನ್ನು ಪರಿಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪಾರ ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಕಂದಾಯ ನಿರೀಕ್ಷಕ ಮಹ್ಮದ್ ಸುಬಾನ್, ಗ್ರಾಮ ಲೆಕ್ಕಾಧಿಕಾರಿ ಮೈನೋದ್ದಿನ್ ಇದ್ದರು.