ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಶುಕ್ರವಾರ ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ಆಲಿಸಿದರು.
ತಹಸೀಲ್ದಾರ್ ನಾಗಯ್ಯ ಹಿರೇಮಠ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಂ ಪಾಷಾ, ಸಿಡಿಪಿಒ ಆರತಿ ತುಪ್ಪದ್, ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ್, ತೋಟಗಾರಿಕೆ ಅಧಿಕಾರಿ ಶಂಕರಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಪಿಎಸ್ಐ ಶ್ರೀಶೈಲ್ ಅಂಬಾಟಿ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.