ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಚಿಂಚನಸೂರ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (93) (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ವಿಧಿವಶರಾಗಿರುವುದು ತುಂಬಲಾರದ ನಷ್ಟ ಉಂಟಾಗಿದ್ದು ಕರ್ನಾಟಕದಲ್ಲಿ ಕತ್ತಲೆ ಆವರಿಸಿದೆ ಎಂದು ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.
ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ನನ್ನನ್ನು ಸುಪ್ತ ಖಾತೆಗಳ ಸಚಿವರಾಗಿ ಮಾಡಿದ್ದರು. ಅವರು ನನ್ನ ರಾಜಕೀಯ ಗುರುಗಳಾಗಿದ್ದರು ಅವರ ಆದರ್ಶ ರಾಜಕಾರಣ ನನಗೆ ಪ್ರೇರಣೆಯಾಗಿತ್ತು ಈಗ ಅವರ ನಿಧನದಿಂದ ನನ್ನನ್ನು ಅನಾಥ ಪ್ರಜ್ಞೆ ಕಾಡುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಮುತ್ಸದ್ದಿ ರಾಜಕಾರಣಿಯಾಗಿದ್ದು, ಅಭಿವೃದ್ಧಿ ಚಿಂತಕರು, ಶಿಸ್ತಿನ ಸಿಪಾಯಿಯಾಗಿದ್ದ ಎಸ್.ಎಂ.ಕೃಷ್ಣ ಅವರು ಹಲವು ದಶಕಗಳ ಕಾಲ ಸುದೀರ್ಘವಾಗಿ ರಾಜಕೀಯ ಜೀವನದಲ್ಲಿ 1999ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪಾಂಚಜನ್ಯ ಯಾತ್ರೆ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಆನಂತರ 2004 ರಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್.ಎಂ. ಕೃಷ್ಣ ಅಪರೂಪದ ರಾಜಕಾರಣಿ ಎನಿಸಿಕೊಂಡಿದ್ದರು. ಐ.ಟಿ ಕ್ಷೇತ್ರದಲ್ಲಿ ಬೆಂಗಳೂರು ನಗರವನ್ನು ಇಡೀ ಜಗತ್ತೇ ಗುರುತಿಸುವಂತೆ ಹಾಗೂ ಸಿಲಿಕಾನ್ ಸಿಟಿಯನ್ನಾಗಿ ಮಾಡಿದ್ದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.