Oplus_0

ವಾಡಿ ಬಿಜೆಪಿ ಕಚೇರಿಯಲ್ಲಿ ಎಸ್.ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ, ಎಸ್.ಎಂ.ಕೃಷ್ಣ ದಕ್ಷ ಆಡಳಿತದಿಂದ ಎಲ್ಲರಿಗೂ ಮಾದರಿಯಾಗಿದ್ದರು: ಪಂಚಾಳ

ನಾಗಾವಿ ಎಕ್ಸಪ್ರೆಸ್

ವಾಡಿ: ಪಟ್ಟಣದ ಬಿಜಿಪಿ ಕಚೇರಿಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕರು ಎಸ್. ಎಂ. ಕೃಷ್ಣ ಅವರಿಗೆ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಎಸ್. ಎಂ. ಕೃಷ್ಣ ಅವರು ಮುತ್ಸದ್ಧಿ ರಾಜಕಾರಣಿಯಾಗಿ, ನಾಡಿನ ಜನಪ್ರಿಯ ಮುಖ್ಯಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕರ್ನಾಟಕ ವಿಧಾನ ಪರಿಷತ್ ಸ್ಪೀಕರ್ ಆಗಿ ರಾಜಕೀಯ ರಂಗದಲ್ಲಿ ಮೇರು ವ್ಯಕ್ತಿತ್ವದವರಾಗಿದ್ದರು. ಅವರು ಸರಳ ವ್ಯಕ್ತಿತ್ವ ದಿಂದ ಜನಮನ್ನಣೆಗಳಿಸಿದ್ದರು. ಹೊಸಚಿಂತನೆಗಳ ಅನೇಕ ಜನಸ್ನೇಹಿ ಅಭಿವೃದ್ಧಿ ಯೋಜನೆಗಳ ಮೂಲಕ ನಾಡಿನ ವಿಕಾಸಕ್ಕೆ ಅವರ ಕೊಡುಗೆ ಸದಾ ಸ್ಮರಣೀಯ. ಸುಮಾರು ಆರು ದಶಕಗಳ ಸುದೀರ್ಘ ರಾಜಕೀಯ ಜೀವನದಲ್ಲಿ ತಮ್ಮ ದೂರದೃಷ್ಟಿತ್ವ, ನಾಯಕತ್ವ, ದಕ್ಷ ಆಡಳಿತದಿಂದ ಎಲ್ಲರಿಗೂ ಮಾದರಿಯಾಗಿದ್ದರು ಎಂದು ಹೇಳಿದರು.

ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಎಸ್.ಎಂ ಕೃಷ್ಣ ಅವರು ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಮ್ಮ ಕಲ್ಯಾಣ ಕರ್ನಾಟಕಕ್ಕೆ ಹೆಚ್ಚು ಒತ್ತು ನೀಡಿ ಈ ಭಾಗದ ಅಭಿವೃದ್ಧಿಗೆ ಶ್ರಮಿಸಿದರು ಎಂದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡಿದ್ದ ಅವರು ಭೂ ದಾಖಲೆಯನ್ನು ಡಿಜಿಟಲೀಕರಣಗೊಳಿಸುವ, ಸರ್ಕಾರಿ ಮಕ್ಕಳಿಗೆ ಬಿಸಿಯೂಟ ಯೋಜನೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಯೋಜನೆ ಜಾರಿಗೆ ತಂದಿದ್ದರು. ಮಾಹಿತಿ ಮತ್ತು ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ಕೊಟ್ಟು ರಾಜ್ಯದಲ್ಲಿ ಐಟಿಬಿಟಿ ಕ್ರಾಂತಿ ಮಾಡಿದ್ದರು. ಬೆಂಗಳೂರನ್ನು ಸಿಲಿಕಾನ್‌ ಸಿಟಿಯಾಗಿಸಿ ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆ ಹೊಂದಿದ್ದರು. ಅವರ ದೂರದೃಷ್ಟಿ ಎಲ್ಲಾ ರಾಜಕಾರಣಿಗಳಿಗೆ ಮಾದರಿ, ಅವರ ಅಗಲಿಕೆ ರಾಜಕೀಯ ವಲಯ ದುಃಖತಪ್ತವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್ ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಯುವ ಮೋರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ಸಿದ್ದಣ್ಣ ಕಲ್ಲಶೆಟ್ಟಿ, ಗಿರಿಮಲ್ಲಪ್ಪ ಕಟ್ಟಿಮನಿ, ಕಿಶನ ಜಾಧವ್, ಆನಂದ ಇಂಗಳಗಿ, ಕುಮಾರ ಚವ್ಹಾಣ, ಪಂಡಿತ ಪವಾರ, ವಿಜಯಕುಮಾರ ಚವ್ಹಾಣ, ಅಂಬ್ರೇಷ್ ರಡ್ಡಿ, ಭಾಲರಾಜ ಪಗಡಿಕರ್ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!