ಕೋರವಾರ ಸರ್ಕಾರಿ ಪ್ರೌಢಶಾಲೆಯಲ್ಲಿ 23ನೇ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ, ಇಂಧನ ಸಂರಕ್ಷಣೆ ಎಲ್ಲರ ಕರ್ತವ್ಯ: ಡಾ.ವಾಸುದೇವ ಸೇಡಂ
ನಾಗಾವಿ ಎಕ್ಸ್‌ಪ್ರೆಸ್
ಕಾಳಗಿ: ಪ್ರತಿಯೊಬ್ಬರಿಗೂ ವಿದ್ಯುತ್ ಬೇಕು, ವಿದ್ಯುತ್ ಇಲ್ಲದೆ ಯಾವ ಕೆಲಸವೂ ಆಗುವುದಿಲ್ಲ ಎಂಬುವಷ್ಟರ ಮಟ್ಟಿಗೆ ನಾವು ಅದಕ್ಕೆ ಒಗ್ಗಿಹೋಗಿದ್ದೇವೆ. ಆದರೆ ಅದು ಪೋಲಾಗದಿರುವಂತೆ ಉಳಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದು ಗುವಿವಿ ನಿವೃತ್ತ ಪ್ರಾಧ್ಯಾಪಕ ಡಾ.ವಾಸುದೇವ ಸೇಡಂ ಎಚ್. ಹೇಳಿದರು.
ತಾಲೂಕಿನ ಕೋರವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ 23ನೇ ರಾಷ್ಟ್ರೀಯ ಇಂಧನ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣೆ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಉದ್ದೇಶವಾಗಿದೆ. ಶಕ್ತಿಯ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ಸಂಪನ್ಮೂಲಗಳನ್ನು ಸಂರಕ್ಷಿಸುವಲ್ಲಿ ಪ್ರತಿಯೊಬ್ಬರೂ ಪಾತ್ರ ವಹಿಸಬೇಕು ಎಂದರು.
ನಿರ್ದಿಷ್ಟವಾಗಿ ಹೇಳುವುದಾದರೆ, ಶಕ್ತಿಯ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಅದನ್ನು ಪರಿಣಾಮಕಾರಿಯಾಗಿ ಬಳಸಲು ಜನರನ್ನು ಪ್ರೋತ್ಸಾಹಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಅಮೂಲ್ಯವಾದ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ನಮ್ಮ ಸಾಮೂಹಿಕ ಜವಾಬ್ದಾರಿಯನ್ನು ಇದು ನಮಗೆ ನೆನಪಿಸುತ್ತದೆ.
ಇಂಧನ ಪ್ರತಿಯೊಬ್ಬರಿಗೂ ಬಹಳ ಅಮೂಲ್ಯವಾದುದು ಇಂಧನವನ್ನು ವ್ಯರ್ಥ ಮಾಡಬಾರದು. ಇಂಧನ ಉಳಿತಾಯದ ಬಗ್ಗೆ ಮಕ್ಕಳಿಗೂ ತಿಳಿಸಿಕೊಡುವುದು ಮುಖ್ಯ. ಮಕ್ಕಳ ಭವಿಷ್ಯ ಉತ್ತಮವಾಗಿರಬೇಕೆಂದರೆ ಇಂಧನ ಉಳಿತಾಯದ ಬಗ್ಗೆ ಅವರಲ್ಲಿ ಅರಿವು ಮೂಡಿಸಬೇಕು. ನೀರು ಪೋಲು ಮಾಡಬಾರದು, ಅನಾವಶ್ಯಕ ವಿದ್ಯುತ್ ಬಳಸಬಾರದು, ಒಂದು ವೇಳೆ ಹಾಗೆ ಮಾಡಿದರೆ ಏನೆಲ್ಲಾ ಸಮಸ್ಯೆ ಆಗಬಹುದು ಎನ್ನುವುದನ್ನು ಅವರಿಗೆ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಅಶೋಕ ಮಿಸ್ಕಿನ್, ರುಮ್ಮನಗೂಡ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಭೀಮರೆಡ್ಡಿ ಮಕಾಶಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್. ಬಿರಾದಾರ, ದೈಹಿಕ ಶಿಕ್ಷಕ ಹಣಮಂತ ಗಿರಿಗೌಡರ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.