ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಬೃಹತ್ ಮಾನವ ಸರಪಳಿಗೆ ಎಲ್ಲರೂ ಕೈಜೋಡಿಸಿ: ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಸಂವಿಧಾನ ಮತ್ತು ಪ್ರಜಾಪ್ರಭುತ್ವ ಭಾರತದ ಆತ್ಮ & ದೇಹಗಳಿದ್ದಂತೆ. ಅವುಗಳಿಗೆ ಗಂಡಾಂತರ ಎದುರಾದರೆ ದೇಶದ ಭವಿಷ್ಯಕ್ಕೂ ಮಂಕು ಕವಿಯಲಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಮತ್ತು ಹೊಣೆಗಾರಿಕೆಯಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಮ್ಮ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಬದ್ದವಾಗಿದ್ದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟೆಂಬರ್ 15 ರಂದು ಬೀದರ್ ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಈ ಜಾಗೃತಿ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಜನರು ರಾಜ್ಯಾದ್ಯಂತ ಪಾಲ್ಗೊಂಡು ಪ್ರಜಾಪ್ರಭುತ್ವದ ಉಳಿವಿಗೆ ತಮ್ಮ ಕೈಜೋಡಿಸಲಿದ್ದಾರೆ. ನೀವೂ ಪ್ರಜಾಪ್ರಭುತ್ವದ ಈ ಮಹಾ ಮಾನವ ಸರಪಳಿಯಲ್ಲಿ ಕೈಜೋಡಿಸಿ. ಎಲ್ಲರೂ ಜೊತೆಯಾಗಿ ಪ್ರಜಾಪ್ರಭುತ್ವದ ಅರಿವು ಮೂಡಿಸೋಣ ಎಂದು ಕರೆ ನೀಡಿದ್ದಾರೆ.