ಚಿತ್ತಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ: ಶಶಿಧರ ಬಿರಾದಾರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಹೇಳಿದರು.
ಪಟ್ಟಣದ ನಾಗಾವಿ ಕ್ಯಾಂಪಸ್ ನ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ರಂಗಮಂಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಚಿತ್ತಾಪುರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಸ್ಪರ್ಧೆ ಮಕ್ಕಳ ಕಲಾಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು, ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದರು.
ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸ್ಪರ್ಧೆ ಒಂದು ವಿನೂತನ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸುತ್ತದೆ. ವಿದ್ಯಾರ್ಥಿಗಳು ಇಂಥ ಉತ್ತಮ ಅವಕಾಶ ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಹೊರಹಾಕುವ ಮೂಲಕ ಉತ್ತಮ ಕಲಾ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಮಕ್ಕಳ ವ್ಯಕ್ತಿತ್ವ ರೂಪಿಸಲು ಮತ್ತು ಅವರಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಪೋಷಕರು ಶಿಕ್ಷಕರೊಡನೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಕಾಶ ನಾಯ್ಕೋಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪ್ರೌಢ ಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಚಂದ್ರಾಮ ಅಮಿನಗಡೆ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾಳಗಿ ಅಧ್ಯಕ್ಷ ಶಿವಕುಮಾರ ಶಾಸ್ತ್ರೀ, ಶಹಾಬಾದ ಅಧ್ಯಕ್ಷ ಡಾ. ಚಿದಾನಂದ ಕುಡ್ಡನ್, ಚಿತ್ತಾಪುರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವಿಂದ್ರರೇಡ್ಡಿ ದುಗುನೂರ, ಕಾಳಗಿ ಅಧ್ಯಕ್ಷ ದೇವಿಂದ್ರ ಹುಣಚಿಕರ್, ಪದವಿಧರ ಶಿಕ್ಷಕರ ಸಂಘದ ಅಧ್ಯಕ್ಷೆ ಗೀತಾ, ಕಾಳಗಿ ಅಧ್ಯಕ್ಷ ದೇವಿಂದ್ರ ಓಕುಳಿ, ಶಹಾಬಾದ ಅಧ್ಯಕ್ಷ ಆನಂದಕುಮಾರ್ ಜಾಧವ, ರಮೇಶ್ ಬೆಟಗೇರಿ, ಹೀರಾಲಾಲ್, ಗುರುಶಾಂತಪ್ಪ ನಾಟೀಕಾರ, ಅಬ್ದುಲ್ ಸಲೀಂ ಸೇರಿದಂತೆ ಅನೇಕರು ಇದ್ದರು. ಶರಣಪ್ಪ ಅಬ್ಬಿಗೇರ್ ಸ್ವಾಗತಿಸಿದರು, ಶಿವಾನಂದ ಕೆಂಪಲ್ಲೇರ್ ನಿರೂಪಿಸಿದರು.