ಚಿತ್ತಾಪುರ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಾಯತ್ರಿ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಟ್ಟಣದ ಗಾಯತ್ರಿ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿಕ್ಷಕ ವಿಷ್ಣುವರ್ಧನ್ ರೆಡ್ಡಿ ಗೋವಿನಾಳ ತಿಳಿಸಿದ್ದಾರೆ.
ಭಕ್ತಿ ಗೀತೆ ಸ್ಪರ್ಧೆಯಲ್ಲಿ ಪೂಜಾ ಪ್ರಥಮ, ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಸುಶ್ಮಿತಾ ಪ್ರಥಮ ಹಾಗೂ ಕನ್ನಡ ಕಂಠ ಪಾಠ ಸ್ಪರ್ಧೆಯಲ್ಲಿ ಐಶ್ವರ್ಯ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಶಾಲೆಯ ಮುಖ್ಯ ಗುರುಗಳು, ಸಹಶಿಕ್ಷಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.