ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿವಾಸಿಯಾದ ಸಚಿನ್ ಪಾಂಚಾಳ ರವರು ಡಿಸೆಂಬರ್ 26 ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ಅತ್ಯಂತ ದುರದೃಷ್ಟಕರ ಹಾಗೂ ಖೇದದ ಸಂಗತಿಯಾಗಿರುತ್ತದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಸಂಶಯ ಮೂಡುವಂತಹ ಹಲವು ವಿಷಯಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ, ಸತ್ಯಾಂಶ ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆಯಾದ ಅಪರಾಧ ತನಿಖಾ ವಿಭಾಗಕ್ಕೆ (ಸಿ.ಐ.ಡಿ.) ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಪತ್ರ ಬರೆದು ಮನವಿ ಮಾಡಿದ್ದಾರೆ.