ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡರು ಸುಳ್ಳು ಆರೋಪ ಮಾಡಿ ಅವರನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಏಳಿಗೆ ಸಹಿಸಿಕೊಳ್ಳಕ್ಕಾಗದೆ, ಬಿಜೆಪಿ ಜಿಲ್ಲಾ ಹಾಗೂ ರಾಜ್ಯದ ನಾಯಕರು ಖರ್ಗೆ ಯವರ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಅವರನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡರಾದ ಸುನೀಲ್ ಗುತ್ತೇದಾರ ವಾಡಿ ಮತ್ತು ಮಲ್ಲಯ್ಯ ಗುತ್ತೇದಾರ ವಾಡಿ ಅವರು ಜಂಟಿಯಾಗಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ವಿನಾಕಾರಣ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ತಳುಕು ಹಾಕುವ ಬಿಜೆಪಿಯವರ ಪ್ರಯತ್ನ ಸಹಿಸುವುದಿಲ್ಲ, ಸಚಿನ್ ಪಾಂಚಾಳ ಆತ್ಮಹತ್ಯೆ ಹಾಗೂ ಆತನು ಬರೆದ ಡೆತ್ ನೋಟ್ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಸಚಿನ್ ಪಾಂಚಾಳ ಬರೆದು ಮರಣ ಪತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ನಮೂದಾಗಿಲ್ಲ ಆದರೂ ಬಿಜೆಪಿ ಮುಖಂಡರು ಸುಳ್ಳು ಆರೋಪಗಳನ್ನು ಮಾಡಿ ಅವರ ರಾಜೀನಾಮೆ ಕೇಳುತ್ತಿರುವ ಅವರ ಪ್ರಯತ್ನ ಎಂದಿಗೂ ಫಲಿಸುವುದಿಲ್ಲ, ಯಾಕೆಂದರೆ, ಜನಪರವಾದ ಕೆಲಸ ಮಾಡುತ್ತಿರುವ ನಾಯಕರಿಗೆ ಯಾವ ಕುತಂತ್ರದಿಂದ ಕುಗ್ಗಿಸಲು ಯಾರಿಂದಲೂ ಸಾದ್ಯವಿಲ್ಲ ಎಂದಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಖುದ್ಧಾಗಿ ರಾಜ್ಯದ ಮುಖ್ಯಮಂತ್ರಿಗಳಿಗೆ ಸಚಿನ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಇಲಾಖೆಗೆ ವಹಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ, ಸಂಪೂರ್ಣ ತನಿಖೆ ಮುಗಿಯುವವರೆಗೂ ಸಹನೆ ತೋರದೆ, ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಯವರ ರಾಜೀನಾಮೆ ಕೇಳುವ ಮುಖಾಂತರ ಗುತ್ತಿಗೆದಾರ ಸಚಿನ ಸಾವಿನಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಇದು ಶೋಭೆ ತರುವಂತಹದ್ದು ಅಲ್ಲ ಎಂದು ತಿಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಪ್ರಬುದ್ಧ ರಾಜಕಾರಣಿಯಾಗಿದ್ದು, ಅವರು ಯಾವುದೇ ಅಪರಾಧಕ್ಕೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಸಹಕರಸಲ್ಲ ಹೀಗಾಗಿ ಅವರ ವಿರುದ್ಧ ಬಿಜೆಪಿ ಅವರಿಗೆ ಟೀಕೆ ಮಾಡುವ ಯಾವುದೇ ನೈತಿಕತೆಯಿಲ್ಲ ಎಂದು ತಿಳಿಸಿದ್ದಾರೆ.