ಚಿತ್ತಾಪುರದಲ್ಲಿ ನಾಳೆ ಶೈಕ್ಷಣಿಕ ಕಾರ್ಯಾಗಾರ, ಕ್ಯಾಲೆಂಡರ್ ಬಿಡುಗಡೆ ಹಾಗೂ ತಾಲೂಕು ಸರಕಾರಿ ನೌಕರರ ಸಂಘದ ಚುನಾಯಿತ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜನವರಿ 9 ರಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಘಟಕ ಚಿತ್ತಾಪುರ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ ಮತ್ತು ಕ್ಯಾಲೆಂಡರ್ ಬಿಡುಗಡೆ, ತಾಲೂಕು ಸರಕಾರಿ ನೌಕರರ ಸಂಘದ ಚುನಾಯಿತ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ನಾಲವಾರ ತಿಳಿಸಿದ್ದಾರೆ.
ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸುವರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ವಿಶೇಷ ಆಹ್ವಾನಿತರಾಗಿ ನಾಗರೆಡ್ಡಿ ಪಾಟೀಲ ಕರದಾಳ, ಭೀಮಣ್ಣ ಸಾಲಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೂರ್ಯಕಾಂತ ಮದಾನೆ, ವಿಶ್ರಾಂತ ಉಪನಿರ್ದೇಶಕ ಶಾಂತಗೌಡ ಪಾಟೀಲ, ಯಾದಗಿರಿ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ತಹಸೀಲ್ದಾರ್ ನಾಗಯ್ಯ ಸ್ವಾಮಿ ಹಿರೇಮಠ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ ಅಕ್ರಂ ಪಾಷಾ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಉಪನಿರ್ದೇಶಕರ ಕಾರ್ಯಾಲಯದ ಶಿಕ್ಷಣಾಧಿಕಾರಿ ಶಂಕ್ರಮ್ಮ ಢವಳಗಿ, ಸಿಡಿಪಿಒ ಆರತಿ ತುಪ್ಪದ್ ಸೇರಿದಂತೆ ಅನೇಕ ಗಣ್ಯರು ಅಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದ್ದಾರೆ.