ಚಿತ್ತಾಪುರ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪೂರ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ
ನಾಗಾವಿ ಎಕ್ಸಪ್ರೆಸ್
ಕಲಬುರ್ಗಿ: ನಗರದ ಕನ್ನಡ ಭವನ ಸುವರ್ಣ ಸೌಧದಲ್ಲಿ ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ಸಾಹಿತ್ಯ ಪರಿಷತ್ ಹಾಗೂ ಶ್ರೀ ಅಲ್ಲಮಪ್ರಭು ಸಂಸ್ಥಾನ ಮಠ, ತೊನಸನಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜನ ಜಾಗೃತಿ ಯಾತ್ರೆ ಮತ್ತು ಮನ ಸಾಕ್ಷಿ ಗ್ರಂಥ ಬಿಡುಗಡೆ ಮತ್ತು ರಾಷ್ಟ್ರೀಯ ವಿಚಾರ ಸಂಕಿರ್ಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತೊನಸನಳ್ಳಿ ಅಲ್ಲಮಪ್ರಭು ಸಂಸ್ಥಾನ ಮಠದ ಪೀಠಾಧಿಪತಿ ಮಲ್ಲಣ್ಣಪ್ಪ ಮಹಾಸ್ವಾಮಿಗಳು ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷ ಶಿವುಕುಮಾರ ಯಾಗಾಪೂರ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಿ.ಜಿ.ಪಾಟೀಲ, ಶ್ರೀ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಅಮರೇಶ್ವರಿ ಚಿಂಚನಸೂರ, ಸಮಾಜ ಸೇವಕಿ ಜಯಶ್ರೀ ಮತ್ತಿಮುಡ್, ಕಾಡಾ ಮಾಜಿ ಅಧ್ಯಕ್ಷ ಶರಣಪ್ಪ ತಳವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.