ಮಹಾದೇವಮ್ಮ ಬಿ. ಪಾಟೀಲ ಮೆಮೋರಿಯಲ್ ಪಿ.ಯು ಕಾಲೇಜು ವತಿಯಿಂದ 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭೆ ಗುರುತಿಸುವ ಪರೀಕ್ಷೆ ಫೆ.2 ಮತ್ತು 9 ರಂದು: ನಾಗರೆಡ್ಡಿ ಪಾಟೀಲ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ವಿಶ್ವಗುರು ಶಿಕ್ಷಣ ಸಂಸ್ಥೆಯ ಶ್ರೀಮತಿ ಮಹಾದೇವಮ್ಮ ಬಿ. ಪಾಟೀಲ ಮೆಮೋರಿಯಲ್ ಪದವಿ ಪೂರ್ವ ಕಾಲೇಜು ವತಿಯಿಂದ 10 ನೇ ತರಗತಿಯಿಂದ ಹೊರಹೊಮ್ಮುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಪ್ರತಿಭೆ ಗುರುತಿಸುವ ಪರೀಕ್ಷೆಗಳನ್ನು (Talent Search Exam) ದಿನಾಂಕ ಫೆಬ್ರವರಿ 2 ರಂದು ಹಾಗೂ 9 ರಂದು ಕಾಲೇಜು ಆವರಣದಲ್ಲಿ ನಡೆಸಲು ತೀರ್ಮಾನಿಸಿದ್ದು ಆಸಕ್ತಿವುಳ್ಳ ವಿದ್ಯಾರ್ಥಿಗಳು ಸ್ವ ಇಚ್ಛೆಯಿಂದ ಭಾಗಿಯಾಗಬೇಕು ಎಂದು ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಕೋರಿದ್ದಾರೆ.
ಫೆಬ್ರವರಿ 16 ರಂದು 10 ನೇ ತರಗತಿಯಿಂದ ಹೊರಹೊಮ್ಮುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ರಸಪ್ರಶ್ನೆವುಳ್ಳ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಂಡಿದ್ದು ಭಾಗಿಯಾಗಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೊದಲನೆ ಬಹುಮಾನ -10,100, ಎರಡನೆ ಬಹುಮಾನ 5,100, ಮೂರನೇ ಬಹುಮಾನ 2,500 ಬಹುಮಾನ ವಿತರಿಸಲಾಗುವುದು. ತಾಲೂಕಿನ ಎಲ್ಲಾ ಪ್ರೌಢ ಶಾಲೆ ಕೇಂದ್ರಗಳಿಂದ ಉಚಿತ ಸಾರಿಗೆ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಸೂಚನೆ: ಮೊದಲನೇ ಐದು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಉಚಿತ ಪ್ರವೇಶ ನೀಡಲಾಗುವುದು. ಉಳಿದ 20 ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ರಾಂಶುಪಾಲರನ್ನು ಹಾಗೂ ಉಪನ್ಯಾಸಕರನ್ನು 7406620055, 9591450303, 9663542019 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.