ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ: ಚವ್ಹಾಣ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ತಾಲೂಕು ಘಟಕದ ತಾಲೂಕ ಅಧ್ಯಕ್ಷ ಸುನೀಲ್ ಚವ್ಹಾಣ ತಿಳಿಸಿದ್ದಾರೆ.
ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಫೆ. 10 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು ಕಂದಾಯ ಇಲಾಖೆಯ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಆ ಕಾರಣಕ್ಕಾಗಿ ಸಾರ್ವಜನಿಕರ ಗಮನಕ್ಕಾಗಿ ತಹಸೀಲ್ದಾರರ ಕಚೇರಿಯಲ್ಲಿ ಬ್ಯಾನರ್ ಅಳವಡಿಸಲಾಗಿದ್ದು ಎಲ್ಲಾ ಸಾರ್ವಜನಿಕರ ಸಹಕರಿಸಲು ತಾಲೂಕು ಅಧ್ಯಕ್ಷರು ಕೋರಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕ ಉಪಾಧ್ಯಕ್ಷ ಮೈನೋದ್ದಿನ್, ನರಸರೆಡ್ಡಿ, ಸತೀಶ ಖರಾಬಿ, ನಾಗಣ್ಣ , ಅಮರೇಶ, ಸಂಜುಕುಮಾರ, ಚಂದ್ರಶಾ, ನಾಗರಾಜ, ನಾಗಣ್ಣ ವಾಡಿ ಹಾಜರಿದ್ದರು.