ಫೆ.22 ರಂದು ಚಿತ್ತಾಪುರದಲ್ಲಿ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಸರಕಾರಿ ಪ್ರೌಢಶಾಲೆಯಲ್ಲಿ 1981-82 ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ಇದೇ ಫೆ.22 ರಂದು ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ರಾಜು ಕುಲಕರ್ಣಿ ಕರದಾಳ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಟ್ಟಣದ ಸರಕಾರಿ ಪ್ರೌಢಶಾಲೆಯಲ್ಲಿ 1981-82 ನೇ ಸಾಲಿನಲ್ಲಿ ಕಲಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಕಲಿಸಿದ ಗುರುಗಳಿಗೆ ಗುರುವಂದನೆ ಸಲ್ಲಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಡಿವೈಎಸ್ಪಿ ಶಂಕರಗೌಡ ಪಾಟೀಲ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಕಾಳಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಸಲಿಂಗಪ್ಪ ಡಿಗ್ಗಿ, ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಮುಖ್ಯಗುರು ಕಾಶಿರಾಯ ಕಲಾಲ್ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಗುರುವಂದನಾ ಕಾರ್ಯಕ್ರಮದಲ್ಲಿ 1981-82 ನೇ ಸಾಲಿನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಮೋನಪ್ಪ ಇನಾಮದಾರ, ಎಚ್. ಎಚ್ ಯಾದವ್, ಮಧುಕರ್ ರಾವ್ ನಾಯಕ್, ಸಿ.ಎನ್, ಪಟ್ಟೇದಾರ, ಡಿ.ಮಹಾದೇವಪ್ಪ, ಚಂದ್ರಾಮಪ್ಪ ಕಾಳಗಿ ಇವರನ್ನು ಆತ್ಮೀಯವಾಗಿ ಕೃತಜ್ಞತೆ ಭಾವದಿಂದ ಸತ್ಕರಿಸಲಾಗುವುದು ಎಂದರು.
ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು ಹಳೆಯ ವಿದ್ಯಾರ್ಥಿಗಳು ದೂರದಲ್ಲಿ ಇದ್ದರೂ ಎಲ್ಲರೂ ಬರಲು ಉತ್ಸುಕರಾಗಿದ್ದಾರೆ. ಹಾಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿ ಆಗಲಿದ್ದಾರೆ ಎಂದು ಕುಲಕರ್ಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಾಮನ ರಾವ್ ಹಡಪದ, ಪ್ರಕಾಶ್ ದೊಂಡಿಬಾ ಇದ್ದರು.