Oplus_0

ಯಾದಗಿರಿ: ಎಸ್ಸಿಪಿ ಮತ್ತು ಟಿಎಸ್ಪಿ ಹಣ ದುರ್ಬಳಕೆ ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ 

ನಾಗಾವಿ ಎಕ್ಸಪ್ರೆಸ್

ಯಾದಗಿರಿ: ಎಸ್ಸಿಪಿ ಮತ್ತು ಟಿಎಸ್ಪಿ ಹಣ ದುರ್ಬಳಕೆ ಮಾಡಿ ಗ್ಯಾರಂಟಿ ಸ್ಕೀಮ್ ಗಳಿಗೆ ಹಣ ಕೊಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ದಲಿತ ದ್ರೋಹಿ ನಡೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮಂಗಳವಾರ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎನ್. ಮಹೇಶ, ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ನಗರಸಭೆ ಅಧ್ಯಕ್ಷೆ ಕುಮಾರಿ ಲಲಿತಾ ಅನಪೂರ, ಜಿಲ್ಲೆಯ ಯುವ ಮುಖಂಡರಾದ  ಮಹೇಶರೆಡ್ಡಿ ಮುದ್ನಾಳ, ಹಿರಿಯ ಮುಖಂಡ ದೇವಿಂದ್ರನಾಥ ನಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ಪರಶುರಾಮ ಕುರಕುಂದಿ, ಮೇಲಪ್ಪ ಗುಳಗಿ ಜಿಲ್ಲಾ ಬಿಜೆಪಿ ವಕ್ತಾರ ಹಣಮಂತ ಇಟಗಿ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಅತ್ತಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಮ್ಮನೂರ್ ಹಾಗೂ ಪಕ್ಷದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ವಿವಿಧ ಮೋರ್ಚಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಮುಖಂಡರು, ಹಿರಿಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!