ಚಿತ್ತಾಪುರ ಪುರಸಭೆ ವಿರೋಧ ಪಕ್ಷದ ನಾಯಕರಾಗಿ ರಮೇಶ್ ಬೊಮ್ಮನಳ್ಳಿ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪುರಸಭೆ ವಾರ್ಡ್ ನಂ.22 ರ ಸದಸ್ಯ ರಮೇಶ್ ಬೊಮ್ಮನಳ್ಳಿ ಅವರನ್ನು ಪುರಸಭೆಯ ಬಿಜೆಪಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ್ದು, ಅಧಿಕೃತವಾಗಿ ಘೋಷಿಸುವಂತೆ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಪುರಸಭೆ ಮುಖ್ಯಾಧಿಕಾರಿಗೆ ಸೋಮವಾರ ಪತ್ರ ಬರೆದಿದ್ದಾರೆ.
2025 ನೇ ಸಾಲಿನ ಪುರಸಭೆಯ ವಿರೋಧ ಪಕ್ಷದ ನಾಯಕನಾಗಿ ಅಧಿಕೃತವಾಗಿ ಘೋಷಿಸಬೇಕು ಬಿಜೆಪಿ ಅಧ್ಯಕ್ಷರು ಕೋರಿದ್ದಾರೆ.