ಚಿತ್ತಾಪುರದಲ್ಲಿ ನಾಳೆ ನಾಗಯ್ಯ ಸ್ವಾಮಿ ಅಲ್ಲೂರ ನುಡಿನಮನ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮಲಕಂಡಿ ಮನವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಏಪ್ರಿಲ್ 8 ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದ ವತಿಯಿಂದ ಪತ್ರಕರ್ತ ದಿ.ನಾಗಯ್ಯಸ್ವಾಮಿ ಅಲ್ಲೂರ ಅವರ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಸಿದ್ದರಾಜ ಮಲಕಂಡಿ ತಿಳಿಸಿದ್ದಾರೆ.
ಪತ್ರಕರ್ತ ನಾಗಯ್ಯ ಸ್ವಾಮಿ ಅಲ್ಲೂರ ಅವರು ಪತ್ರಿಕಾ ರಂಗದಲ್ಲಿ ಕಳೆದ 25 ವರ್ಷಗಳಿಂದ ಸುದೀರ್ಘವಾಗಿ ಸೇವೆ ಸಲ್ಲಿಸಿ ಇದೇ ಏಪ್ರಿಲ್ 5 ರಂದು ನಿಧನರಾಗಿದ್ದಾರೆ. ಅವರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ನುಡಿನಮನ ಹಮ್ಮಿಕೊಂಡಿದ್ದು, ಎಲ್ಲ ಪತ್ರಕರ್ತರು, ಪಕ್ಷಗಳ ಮುಖಂಡರು, ಸಮಾಜದ ಮುಖಂಡರು, ಹಿತೈಷಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.