Oplus_0

ಪಿಡಿಒ ಮತ್ತು ಇತರ ನೌಕರರ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆಗೆ ಅಧಿಸೂಚನೆ: ಸಚಿವ ಪ್ರಿಯಾಂಕ್ ಖರ್ಗೆ

ನಾಗಾವಿ ಎಕ್ಸಪ್ರೆಸ್ 

ಬೆಂಗಳೂರು: ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವರ್ಗಾವಣೆ ನಿಯಮಗಳ ನಿಯಮ9ರ ಅನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಾರ್ವಜನಿಕ ಹಿತಾಸಕ್ತಿಯ ಹಾಗೂ ಕೋರಿಕೆ ವರ್ಗಾವಣೆಗಳನ್ನು ಸಾಮಾನ್ಯವಾಗಿ ಕ್ಯಾಲೆಂಡ‌ರ್ ವರ್ಷದ ಏಪ್ರಿಲ್ ಮತ್ತು ಮೇ ಮಾಹೆಗಳ ನಡುವಿನಲ್ಲಿ ಮಾಡಬಹುದು ಅಥವಾ ಅಸಾಧಾರಣ ಸಂದರ್ಭಗಳಲ್ಲಿ ಸರ್ಕಾರವು ಅಧಿಸೂಚಿಸಿದಂತೆ ಮಾಡಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2025-26 ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು  ಏಪ್ರಿಲ್ 17 ರಿಂದ 13 ಮೇ 2025 ಒಳಗಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!