ಭಾಗೋಡಿ ಕಾಗಿಣಾ ನದಿಗೆ ಬಿ.ವೈ.ವಿಜಯೇಂದ್ರ ಭೇಟಿ, ಕಾಂಗ್ರೆಸ್ ಮುಖಂಡರಿಂದ ಧಿಕ್ಕಾರ, ಮುಜುಗರಕ್ಕೆ ಒಳಗಾದ ಬಿಜೆಪಿ ರಾಜ್ಯಾಧ್ಯಕ್ಷ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದ ಹತ್ತಿರದ ಕಾಗಿಣಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವೀಕ್ಷಿಸಲು ಶುಕ್ರವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಮುಖಂಡರು ಧಿಕ್ಕಾರ ಕೂಗಿದ ಪ್ರಸಂಗ ನಡೆಯಿತು.

ಗುಂಡಗುರ್ತಿ ಮೂಲಕ ಬೆಳಗುಂಪಾ, ಭಾಗೋಡಿ ರಸ್ತೆಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ವಿಕ್ಷೀಸಿದ ಬಿ.ವೈ.ವಿಜಯೇಂದ್ರ ಭಾಗೋಡಿ ಗ್ರಾಮದ ಹತ್ತಿರದ ಕಾಗಿಣಾ ನದಿಯ ಸೇತುವೆಯ ಮೇಲೆ ಮುಖಂಡರಿಂದ ಮಾಹಿತಿ ಪಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಧಿಕ್ಕಾರ ಕೂಗಿ ಸಚಿವ ಪ್ರಿಯಾಂಕ್ ಖರ್ಗೆ ಪರ ಜಯಘೋಷ ಹಾಕಿದಾಗ ಮುಜುಗರಕ್ಕೆ ಒಳಗಾದರು. ಆಗ ವಿಜಯೇಂದ್ರ ಅಲ್ಲಿಂದ ಕಾಲ್ಕಿತ್ತರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಬಸವರಾಜ ಮತ್ತಿಮುಡ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರ್, ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಅವ್ವಣ್ಣ ಮ್ಯಾಕೇರಿ, ಬಸವರಾಜ ಬೆಣ್ಣೂರಕರ್, ವಿಜಯಕುಮಾರ್ ಕಂಠಿ, ಸುರೇಶ್ ರಾಠೋಡ, ತಮ್ಮಣ್ಣ ಡಿಗ್ಗಿ, ಸಾಬಣ್ಣ ನಾಲವಾರ, ದೇವರಾಜ್ ಬೆಣ್ಣೂರ, ಗುಂಡು ಮತ್ತಿಮುಡ್, ದಶರಥ ದೊಡ್ಡಮನಿ, ನಾಗರಾಜ ಹೂಗಾರ ಸೇರಿದಂತೆ ಅನೇಕರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!