ಎಲ್ಲಾ ಇಲಾಖೆಗಳ ಬಗ್ಗೆ ಮಾತನಾಡುವ ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ ಮರಳುಗಾರಿಕೆ ಬಗ್ಗೆ ಮಾತನಾಡಲು ವಿಜಯೇಂದ್ರ ಆಗ್ರಹ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಎಲ್ಲಾ ಇಲಾಖೆಗಳ ಬಗ್ಗೆ ಮಾತನಾಡುವ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಚಿತ್ತಾಪುರ ಕ್ಷೇತ್ರದಲ್ಲಿ ಹಗಲು ದರೋಡೆ ನಡೆಯುತ್ತಿದೆ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಇದರ ಬಗ್ಗೆ ಮಾತನಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾಗೋಡಿ ಗ್ರಾಮದ ಕಾಗಿಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ನಿತ್ಯ 500 ಟಿಪ್ಪರ್ ಅನಧಿಕೃತವಾಗಿ ಮರಳು ಸಾಗಣೆ ಆಗುತ್ತದೆ ಇದರ ವ್ಯಾಪ್ತಿ ಮಹಾರಾಷ್ಟ್ರ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಗೆ ವಿಸ್ತರಣೆ ಆಗಿದೆ ಇಷ್ಟೇಲ್ಲಾ ತಮ್ಮ ಮೂಗಿನ ಕೆಳಗಡೆ ನಡೆಯುತ್ತಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಮೌನವಹಿಸಿದ್ದಾರೆ ಈ ಕುರಿತು ಬೆಂಗಳೂರಿನಲ್ಲಿ ಚರ್ಚಿಸಿ ತಾರ್ಕಿಕ ಅಂತ್ಯಕ್ಕೆ ತರಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರಾದ ಬಸವರಾಜ ಮುತ್ತಿಮುಡ್, ಡಾ.ಅವಿನಾಶ ಜಾಧವ, ಬಿ.ಜಿ.ಪಾಟೀಲ, ಶಶೀಲ್ ನಮೋಶಿ, ಮಾಜಿ ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕ ರಾಜಕುಮಾರ್ ಪಾಟೀಲ, ಅಪ್ಪುಗೌಡ ಪಾಟೀಲ, ಮುಖಂಡರಾದ ಅವ್ವಣ್ಣ ಮ್ಯಾಕೇರಿ, ನಿತಿನ್ ಗುತ್ತೇದಾರ, ಹರ್ಷಾನಂದ ಗುತ್ತೇದಾರ, ಬಸವರಾಜ ಬೆಣ್ಣೂರಕರ್, ಸಂತೋಷ ಹಾದಿಮನಿ, ತಮ್ಮಣ್ಣ ಡಿಗ್ಗಿ, ಮಹೇಂದ್ರ ಪೂಜಾರಿ ಸೇರಿದಂತೆ ಇತರರು ಇದ್ದರು.