ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು,ಮುಂದೆ ಇಂಥ ಅತಿರೇಕ ಆಗದಂತೆ ಕಟ್ಟೆಚ್ಚರ ವಹಿಸಲು ಬಾಲರಾಜ್ ಗುತ್ತೇದಾರ ಆಗ್ರಹ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತಪ್ಪು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಅವರು ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ಖಂಡಿಸಲಾಗುವುದು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸಬೇಕು ಎನ್ನುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ವಹಿಸಬೇಕು ಎಂದು ಬಾಲರಾಜ್ ಗುತ್ತೇದಾರ ಅವರು ಒತ್ತಾಯಿಸಿದ್ದಾರೆ.