ಚಿತ್ತಾಪುರ ತಾಂತ್ರಿಕ ಕಾರಣದಿಂದ ಉದ್ಯೋಗ ಮೇಳ ಮುಂದೂಡಿಕೆ: ಬಿರಾದಾರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ಯಾಡಮ್ಯಾಕ್ಸ್ ಸಹಯೋಗದೊಂದಿಗೆ ಏಪ್ರಿಲ್ 23 ರಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳವನ್ನು ತಾಂತ್ರಿಕ ಕಾರಣಗಳಿಂದಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರಾಚಾರ್ಯ ಡಾ.ಶಿವಶರಣಪ್ಪ ಬಿರಾದಾರ ತಿಳಿಸಿದ್ದಾರೆ.
ಮುಂದೂಡಲಾದ ಉದ್ಯೋಗ ಮೇಳದ ದಿನಾಂಕವನ್ನು ಮತ್ತೆ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳು ಮರು ನೋಂದಣಿ ಮಾಡಿಕೊಳ್ಳುವ ಅಗತ್ಯ ಇರುವುದಿಲ್ಲ. ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ. ಮತ್ತು ಪದವಿ ವಿದ್ಯಾರ್ಥಿಗಳು ಇನ್ನೂ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವುದರ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾಚಾರ್ಯರು ಮನವಿ ಮಾಡಿದ್ದಾರೆ.