ದೇಶದಲ್ಲಿರುವ ಪಾಕಿಗಳನ್ನು ಕೂಡಲೇ ದೇಶದಿಂದ ಹೊರಹಾಕುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳನ್ನು ಕೂಡಲೇ ದೇಶದಿಂದ ಹೊರ ಹಾಕಬೇಕು ಹಾಗೂ ಪಹಲ್ಗಾಮ್ ಅಮಾಯಕ ಹಿಂದೂಗಳ ಕೊಲೆ ಖಂಡಿಸಿ ದೇಶದಲ್ಲಿ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಲು ಕೂಡಲೇ ದೇಶದಿಂದ ಪಾಕಿಸ್ತಾನ ಪ್ರಜೆಗಳನ್ನು ಭಾರತ ದೇಶದಿಂದ ಹೊರಗೆ ಹಾಕಬೇಕೆಂದು ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡಿ, ದೇಶದಲ್ಲಿರುವ ಜಿಹಾದಿ ಮನಸ್ಥಿತಿಯಲಿರುವ ವ್ಯಕ್ತಿಗಳು ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಪಾಕಿಸ್ತಾನದ ಪರವಾಗಿ ಮಾತನಾಡುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಪ್ರದಾನ ಕಾರ್ಯದರ್ಶಿ ಗುರು ಕಾಮಾ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿ ದೇಶದಲ್ಲಿ ದುಷ್ಕೃತ್ಯ ಹೆಸರು ಭಯೋತ್ಪಾದಕರನ್ನು ಎಲ್ಲಿ ಅಡಿಗೆ ಕುಳಿತರು ಅವರನ್ನು ಬಿಡುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದಾರೆ, ದೇಶ ವಿದೇಶಗಳ ಪ್ರಧಾನ ಮಂತ್ರಿಗಳು ಸಂಪೂರ್ಣ ಬೆಂಬಲವನ್ನು ಭಾರತ ದೇಶಕ್ಕೆ ಕೊಡುತ್ತೇವೆ ಆದರೆ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಗೃಹ ಇಲಾಖೆ ಸಹಕಾರ ನೀಡಬೇಕು ನೀಡಬೇಕು ಎಂದು ಒತ್ತಾಯಿಸಿದರು.
ಅಲೆಮಾರಿ ಅಭಿವೃದ್ಧಿ ನಿಗಮದ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ್ ಮಾತನಾಡಿ, ಕೇಂದ್ರ ಸರ್ಕಾರದ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಬೇಕು ಇಲ್ಲದಿದ್ದರೆ ಇದು ದೇಶದ್ರೋಹವಾಗುತ್ತದೆ ಎಂದು ಗುಡುಗಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೊನ್ನದ, ವೆಂಕಟರೆಡ್ಡಿ ಅಬ್ಬೆತುಮಕೂರು, ಬಸವರಾಜ್ ಗೌಡ ಬಿಳಾರ್, ಯಾದಗಿರಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೊರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ರಾಯಚೂರು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚವ್ಹಾಣ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ರಾಮಸಮುದ್ರ, ನಗರ ಸಭೆ ಸದಸ್ಯರಾದ ಸ್ವಾಮೀದೇವ ದಾಸನಕೆರಿ ಪ್ರಭಾವತಿ ಕಲಾಲ್, ಜಿಲ್ಲಾ ಮಾಧ್ಯಮ ಸಹ ಸಂಚಾಲಕರಾದ ಚಂದ್ರಶೇಖರ್ ಕಡೆಸೂರ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಲ್ಲು ಚಾಪಲ, ಮಂಜುನಾಥ್ ಗುತ್ತೇದಾರ, ಭೀಮಬಾಯಿ ಶಕುಂತಲಾ, ಶಂಕರ ಸೋನಾರ, ಶ್ರೀಕಾಂತ ಸುಂಕುಲಕರ, ಮಹೇಶ ರೆಡ್ಡಿ ಕಮತಗಿ ಸೇರಿ ಅನೇಕರು ಭಾಗಿಯಾಗಿದ್ದರು.