Oplus_131072

ಆಪರೇಷನ್ ಸಿಂಧೂರ್ ಕಾರ್ಯಚರಣೆ ಯಶಸ್ವಿ, ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ 

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಕಾರ್ಯಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಡಾ. ವೆಂಕಟೇಶ್ ಎಂ.ವಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ಮೇ.7 ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆದ್ದರಿಂದ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ರವರು ಭಾರತೀಯ ಸೇನೆಯ ಕಾರ್ಯಾಚರಣೆಗೆ ಶುಭಾಶಯವನ್ನು ಸಲ್ಲಿಸಿರುತ್ತಾರೆ.

ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಸಚಿವರ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಗಳನ್ನು ನೆರವೇರಿಸಲು ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ, ಎಲ್ಲಾ ಸಹಾಯಕ ಆಯುಕ್ತರುಗಳಿಗೆ ಹಾಗೂ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಚಿವರ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಆಯುಕ್ತರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!