Oplus_131072

ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಬಳೂಂಡಗಿ 

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ರಾಜ್ಯ ಸರಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ವತಿಯಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಅದಕ್ಕಾಗಿ ರಾಜ್ಯ ಸರಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ-31ರ ಒಳಗಾಗಿ ಆನ್‌ಲೈನ್ ಮೂಲಕ: online link: https://ksgeanews.blogspot.com ಅರ್ಜಿ ಸಲ್ಲಿಸಬಹುದು ಎಂದು ಸರಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ರವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಂಬಂಧಿಸಿದ ಜಿಲ್ಲಾ/ ತಾಲೂಕಾ ಶಾಖೆಯ ಅಧ್ಯಕ್ಷರ ರುಜು ಮೊಹರಿನೊಂದಿಗೆ ದೃಢೀಕರಿಸಿ ಆನ್‌ಲೈನ್‌ನಲ್ಲಿ ಅಪಲೌಡ್‌ ಮಾಡಬೇಕೆಂದು ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!