ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಸಿಲುಕಿ ಗಾಯಗೊಂಡು ಚಿಕಿತ್ಸೆ ನಡೆಯುತ್ತಿದ್ದ ಚಿತ್ತಾಪುರ ಯುವಕ ಸಂಪತ್ ಕುಮಾರ್ ಆರೋಗ್ಯ ವಿಚಾರಿಸಿದ ಛಲವಾದಿ ನಾರಾಯಣಸ್ವಾಮಿ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಆರ್.ಸಿ.ಬಿ ಐಪಿಎಲ್ ಕ್ರಿಕೆಟ್ ಪಂದ್ಯ ಫೈನಲ್ ಗೆದ್ದ ಸಂಭ್ರಮದ ವಿಜಯೋತ್ಸವದ ನಿಮಿತ್ತ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಚಿತ್ತಾಪುರ ಮತಕ್ಷೇತ್ರದ ನಿವಾಸಿ ಯುವಕ ಸಂಪತ್ ಕುಮಾರ್ ಮಟ್ಟಿ ಆ ಕಾಲ್ತುಳಿತದಲ್ಲಿ ಸಿಲುಕಿ ಗಂಭೀರ ಗಾಯಗೊಂಡು ಕಳೆದ ಐದು ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ ಯುವಕನ ಆರೋಗ್ಯ ಯೋಗ ಕ್ಷೇಮದ ಕುರಿತು ವಿಚಾರಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಸಚಿವ ಬಾಬುರಾವ ಚವ್ಹಾಣ, ಆರ್ ರುದ್ರಯ್ಯ, ಚಿತ್ತಾಪುರ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ನಗರಾಧ್ಯಕ್ಷ ಆನಂದ್ ಪಾಟೀಲ್ ನರಿಬೋಳ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಹೂಗಾರ್, ಶ್ರೀನಿವಾಸ ಹಳ್ಳಿ, ಬಾಲಾಜಿ ಬುರಬುರೆ, ರಮೇಶ ಕಾಳನೂರ, ಶಿವರಾಮ ಚವ್ಹಾಣ ಹಾಗೂ ಚಿತ್ತಾಪುರ ಬಿಜೆಪಿಯ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಯೋಗ ಕ್ಷೇಮ ವಿಚಾರಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

