Oplus_131072

ತಂಬಾಕು ಮಾರಾಟಕ್ಕೆ ಪರವಾನಿಗೆ ಕಡ್ಡಾಯ, ಇಲ್ಲವಾದರೆ ಕಠಿಣ ಕ್ರಮ: ಪೌರಾಯುಕ್ತರು ಎಚ್ಚರಿಕೆ 

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ತಂಬಾಕು ವ್ಯಾಪಾರಿಗಳು ನಗರ ಸಭೆಯಿಂದ ಲೈಸೆನ್ಸ್ ಪಡೆಯುವುದು ಕಡ್ಡಾಯವಾಗಿದ್ದು, ಪರವಾನಗಿ ಇಲ್ಲದೆ ತಂಬಾಕು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಸಭೆಯ ಪೌರಾಯುಕ್ತ ಡಾ. ಕೆ. ಗುರುಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.

ನಗರದ ವ್ಯಾಪ್ತಿಯಲ್ಲಿ ಬರುವ ತಂಬಾಕು ಉತ್ಪನ್ನಗಳ ಮಾರಾಟಗಾರರು ಕಡ್ಡಾಯವಾಗಿ ನಗರ ಸಭೆಯಿಂದ ಪರವಾನಗಿ ಪಡೆದುಕೊಳ್ಳಬೇಕೆಂಬ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ 2022ರ ಮೇ.19 ರಂದು ಕರ್ನಾಟಕ ರಾಜ್ಯ ಪತ್ರದ ಆದೇಶದಂತೆ ನಗರ ಸಭೆಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ.

ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ಅಗತ್ಯವಿರುವ ಪ್ರತ್ಯೇಕ ವ್ಯಾಪಾರ ಪರವಾನಗಿಯನ್ನು ಅಂಗಡಿಗಳು ಹೊಂದಿಲ್ಲದಿದ್ದರೆ ನಾವು ಶೀಘ್ರದಲ್ಲೆ ದಂಡ ವಿಧಿಸಲು ಪ್ರಾರಂಭಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಕಾರಣ ನಗರದಲ್ಲಿ ತಂಬಾಕು ಉತ್ಪನ್ನಗಳನ್ನ ಕಾನೂನು ಬಾಹಿರವಾಗಿ ಮಾರಾಟ ಮಾಡಿದರೆ ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಆರೋಗ್ಯ ಶಾಖೆಯಲ್ಲಿ ಸಂಪರ್ಕಿಸುಂತೆ ಅವರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!