ವಾಡಿಯಲ್ಲಿ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಸಾಮೂಹಿಕ ಯೋಗ ಅಭ್ಯಾಸದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ವೀರಣ್ಣ ಯಾರಿ ಕರೆ 

ನಾಗಾವಿ ಎಕ್ಸಪ್ರೆಸ್ 

ವಾಡಿ: ಪಟ್ಟಣದಲ್ಲಿ ಬರುವ ಜೂನ್ 21 ರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆಯಲ್ಲಿ ನಡೆಯುವ ಸಾಮೂಹಿಕ ಯೋಗ ಅಭ್ಯಾಸದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಕರೆ ನೀಡಿದ್ದಾರೆ.

ಹನ್ನೊಂದನೇ ವಿಶ್ವ ಯೋಗ ದಿನಾಚರಣೆಯ ಒಂದು ಭೂಮಿ, ಒಂದು ಆರೋಗ್ಯ ಎಂಬ ಘೋಷ ವಾಕ್ಯದಂತೆ ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡುವುದರ ಜೊತೆಗೆ ನಮ್ಮ ನೈಸರ್ಗಿಕ ಸಂಪತ್ತಿನ ಪ್ರಯೋಜನದೊಂದಿಗೆ ಪ್ರತಿಯೊಬ್ಬರು ಉತ್ತಮ ಆರೋಗ್ಯ ಹೊಂದಲು ಈ ಯೋಗ ದಿನಾಚರಣೆ ಸ್ಫೂರ್ತಿಯಾಗಲಿದೆ.

ಪತಂಜಲಿ ಯೋಗ ಸಮಿತಿ ಹಾಗೂ ಬೆಳಗಿನ ಬಳಗದ ವತಿಯಿಂದ ಬರುವ ಜೂನ್ 21 ರಂದು ಬೆಳಗ್ಗೆ 6 ಗಂಟೆಯಿಂದ 7 ರವರೆಗೆ ಶ್ರೀ ಮುನಿಯಪ್ಪ ದಾಸ ಶಾಲಾ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗಾಸಕ್ತರೊಂದಿಗೆ ಯೋಗಾಭ್ಯಾಸ ಮಾಡುವುದರ ಮೂಲಕ ಆಚರಿಸಲಾಗುವುದು ಎಂದು ಹೇಳಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!