ಚಿತ್ತಾಪುರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಾಳೆ ಗೌರವ ಸನ್ಮಾನ: ನರಸಿಂಹ ಕುಲಕರ್ಣಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಯಲ್ಲಿ ಹತ್ತನೆಯ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ಮತ್ತು ಐದನೆಯ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ತಾಲೂಕಿನಲ್ಲಿ ಅತಿ ಹೆಚ್ಚು ಪ್ರತಿಶತ ಫಲಿತಾಂಶ ಪಡೆದು ಸರ್ಕಾರಿ ಪ್ರೌಢ ಶಾಲೆಗೆ ಹೂಮನ್ ರೈಟ್ಸ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ಜೂ.21 ರಂದು ಗೌರವ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ನರಸಿಂಹ ಕುಲಕರ್ಣಿ ತಿಳಿಸಿದ್ದಾರೆ.
ಪಟ್ಟಣದ ನಾಗಾವಿ ಗೋ ಶಾಲೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ, ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಸಲಿಂಗಪ್ಪ ಡಿಗ್ಗಿ, ಬಿಆರ್’ಸಿ ಮಲ್ಲಿಕಾರ್ಜುನ ಸೇಡಂ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸಮಾರಂಭದ ಹಮ್ಮಿಕೊಂಡಿದ್ದು, ಕಾರಣ ಪಟ್ಟಣದ ಸಾರ್ವಜನಿಕರು, ಪಾಲಕ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

