ಭಾಗೋಡಿ ಕೂಸಿನ ಮನೆಗೆ ಜಿಪಂ ಸಿಇಒ ಭಂವರಸಿಂಗ್ ಮೀನಾ ಭೇಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮ ಪಂಚಾಯಿತಿಯಲ್ಲಿ ಕೂಸಿನ ಮನೆಗೆ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ ಅವರು ಶನಿವಾರ ಭೇಟಿ ಮಾಡಿದರು.
ಮಕ್ಕಳ ದಾಖಲಾತಿ ಸಂಖ್ಯೆ ಹಾಗೂ ಪೌಷ್ಟಿಕ ಆಹಾರ ಮಕ್ಕಳಿಗೆ ನೀಡುತ್ತಿರುವ ಕುರಿತು ಸೇರಿದಂತೆ ಕೂಸಿನ ಮನೆಯ ವ್ಯವಸ್ಥೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ನರೇಗಾ ಸಹಾಯಕ ನಿರ್ದೇಶಕ ಪಂಡಿತ್ ಶಿಂಧೆ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

