Oplus_131072

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ಪಾಟೀಲ್ ಗೋಣಗಿ ನೇಮಕ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಕರ್ನಾಟಕ ರಾಜ್ಯ ರೈತರ ಉಳಿವಿಗಾಗಿ ಹಾಗೂ ಅಭಿವೃದ್ಧಿಗಾಗಿ ಸ್ವಾಭಿಮಾನಿ ರೈತರ ರಕ್ಷಣೆಗಾಗಿ ಉದಯವಾಗಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ. ಹಾಗೂ ಕಾರ್ಯಾಧ್ಯಕ್ಷ ಶಿವಪ್ಪ ಅಮಣಿ ಇವರ ಆದೇಶದ ಮೇರೆಗೆ ಉತ್ಸಾಹಿ ಸಮಾಜ ಸೇವಕರು ಮತ್ತು ಈ ಹಿಂದೆ ರೈತ ಪರ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸದ ಶಿವರಾಜ್ ಹೆಚ್.ಪಾಟೀಲ್ ಗೋಣಗಿ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಇಂದಿನಿಂದಲೇ ನೀಡಿರುವ ಹುದ್ದೆಯನ್ನು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿಕೊಂಡು ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರೈತರ ಧ್ವನಿಯಾಗಿ ಕೆಲಸ ಮಾಡಬೇಕು ಹಾಗೂ ರೈತರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ರಾಜ್ಯ ಅಧ್ಯಕ್ಷ ಎಚ್.ಆರ್ ಬಸವರಾಜಪ್ಪ ಹಾಗೂ ಕಾರ್ಯದರ್ಶಿ ಶಿವಪ್ಪ ಅಮಣಿ ಅವರು ಸೂಚಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!