ಚಿತ್ತಾಪುರ ಪಿಎಲ್‌ಡಿ ಬ್ಯಾಂಕ್ ಗೆ ಆಯ್ಕೆಯಾದ ಅಧ್ಯಕ್ಷ- ಉಪಾಧ್ಯಕ್ಷರಿಗೆ ಕೋಲಿ ಸಮಾಜದ ವತಿಯಿಂದ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ) ಗೆ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ಭೀಮಣ್ಣ ಸಾಲಿ ಹಾಗೂ ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡದ್ ಅವರಿಗೆ ತಾಲೂಕು ಕೋಲಿ ಸಮಾಜದ ವತಿಯಿಂದ ಸನ್ಮಾನಿಸಿ ಶುಭಾಶಯಗಳು ಕೋರಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಮರಗೋಳ, ಜಿಪಂ ಮಾಜಿ ಸದಸ್ಯರಾದ ಶಿವಾನಂದ ಪಾಟೀಲ, ಶಿವರುದ್ರಪ್ಪ ಭೀಣ್ಢಿ, ವಾಡಿ ಅಧ್ಯಕ್ಷ ಮಹಿಮೂದ್ ಸಾಹೇಬ್, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ್, ಹಣಮಂತ ಸಂಕನೂರ, ವೆಂಕಟರಮಣ ಬೇವಿನಗಿಡ, ದೇವಿಂದ್ರ ಅರಣಕಲ್, ಭೀಮರಾಯ ಹೊತಿನಮಡಿ, ಶರಣು ಡೋಣಗಾಂವ, ದೇವು ಯಾಬಾಳ, ಪ್ರಭು ಹಲಕರ್ಟಿ, ನಾಗಯ್ಯ ಗುತ್ತೇದಾರ, ನಾಗರೆಡ್ಡಿ ಗೋಪಸೇನ್, ನಿಂಗಾರೆಡ್ಡಿ ಭೀಮನಳ್ಳಿ, ರಾಜಣ್ಣ ಕರದಾಳ, ಸುರೇಶ್ ಗುತ್ತೇದಾರ, ಖಾಜಾ ಬಾದಲ್ ಸೇರಿದಂತೆ ಇತರರು ಇದ್ದರು.

