ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬದ ನಿಮಿತ್ತ ಜಿಲ್ಲಾ ಆಸ್ಪತ್ರೆಯಲ್ಲಿ ಅನ್ನಸಂತರ್ಪಣೆ: ಜಗದೇವ ಗುತ್ತೇದಾರ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಜೀಯವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಜು.21 ರಂದು ಬೆಳಿಗ್ಗೆ 11 ಗಂಟೆಗೆ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಲಾಗುವುದು ಎಂದು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಕಲಬುರಗಿ ನಗರದ ಸರಕಾರಿ ಜಿಲ್ಲಾ ಆಸ್ಪತ್ರೆಗೆ (ಜಿಮ್ಸ್ ಆಸ್ಪತ್ರೆ) ತೆರಳಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಹಂಚಿ ನಂತರ ಆಸ್ಪತ್ರೆಯ ಆವರಣದಲ್ಲಿ ಬಡ ಜನರಿಗೆ ಅನ್ನ ಸಂತರ್ಪಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಆದ್ದರಿಂದ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

