Oplus_131072

ಮಲ್ಲಿಕಾರ್ಜುನ ಖರ್ಗೆ ಜನ್ಮದಿನದ ಪ್ರಯುಕ್ತ ವಿಧವೆಯರಿಗೆ ಸೀರೆ ವಿತರಣೆ, ಖರ್ಗೆ ಅಪರೂಪದ ರಾಜಕಾರಣಿ: ನಾಗರೆಡ್ಡಿ ಪಾಟೀಲ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಅಷ್ಟೇ ಅಲ್ಲ ಇಡೀ ಭಾರತ ದೇಶದಲ್ಲಿಯೇ ಸಾಮಾಜಿಕ ನ್ಯಾಯದ ಪರವಾಗಿರುವ ಅಪರೂಪದ ರಾಜಕಾರಣಿಯಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಪಟ್ಟಣದ ಬಸವ ನಗರದಲ್ಲಿ ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರ 83 ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಿಧವೆಯರಿಗೆ ಸೀರೆ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಒಂದೇ ಪಕ್ಷದಲ್ಲಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದರಿಂದಲೇ ಇಂದು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಇವರು ರಾಜಕಾರಣಕ್ಕೆ ಆದರ್ಶಪ್ರಾಯರು ಹಾಗೂ ಮಾದರಿಯಾಗಿದ್ದಾರೆ ಎಂದು ಹೇಳಿದರು.

ನೇತೃತ್ವ ವಹಿಸಿದ್ದ ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಲ್ಲಿಕಾರ್ಜುನ ಕಾಳಗಿ ಮಾತನಾಡಿ, ಸಣ್ಣ ಹಳ್ಳಿಯಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದಿಲ್ಲಿವರೆಗೆ ಬೆಳೆದ ಅವರ ಜೀವನವೇ ಒಂದು ಅದ್ಭುತ. ಅನೇಕ ಕಷ್ಟ ನೋವು ನಲಿವುಗಳನ್ನು ಮೀಟಿ ಕಾಂಗ್ರೆಸ್ ಪಕ್ಷದ ದೇಶದ ಅತ್ಯುನ್ನತ ಸ್ಥಾನಕ್ಕೆ ಹೋಗಿರುವುದು ಬಹುದೊಡ್ಡ ಸಾಧನೆಯಾಗಿದೆ ಎಂದು ಬಣ್ಣಿಸಿದರು. ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹಾಗೂ ಸಾಮಾಜಿಕ ನ್ಯಾಯದ ಪರವಾಗಿದ್ದಾರೆ ಎಂದು ಹೇಳಿದರು.

ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್, ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಮಾತನಾಡಿದರು. ಇದೇ ವೇಳೆ ವಿಧವೆಯರಿಗೆ ಸೀರೆ ವಿತರಣೆ ಮಾಡಲಾಯಿತು.

ಸಿಪಿಐ ಚಂದ್ರಶೇಖರ ತಿಗಡಿ, ಬಿಇಓ ಶಶಿಧರ ಬಿರಾದಾರ, ಪಿಎಸ್ಐ ಶ್ರೀಶೈಲ್ ಅಂಬಾಟಿ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಸದಸ್ಯರಾದ ಚಂದ್ರಶೇಖರ ಕಾಶಿ, ಶೀಲಾ ಕಾಶಿ, ರಸೂಲ್ ಮುಸ್ತಫಾ, ಮುಖಂಡರಾದ ನಾಗರೆಡ್ಡಿ ಗೋಪಸೇನ್, ಶೇಖ್ ಬಬ್ಲು, ಖಾಜಾ ಬಾದಲ್, ಭೀಮಸಿಂಗ್ ಚವ್ಹಾಣ, ದೇವು ಯಾಬಾಳ, ಮಲ್ಲಿಕಾರ್ಜುನ ರಾಜೋಳ್ಳಾ, ಶರಣು ಡೋಣಗಾಂವ, ಮಹಾಂತೇಶ್ ಬೊಮ್ಮನಳ್ಳಿ, ಶ್ರೀಕಾಂತ್ ಹೊಸಳ್ಳಿಕರ್, ಸೇರಿದಂತೆ ಇತರರು ಇದ್ದರು. ದೇವಪ್ಪ ನಂದೂರಕರ್ ನಿರೂಪಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!