ಜು.30 ರಂದು ಚಿತ್ತಾಪುರದಲ್ಲಿ ಪತ್ರಿಕಾ ದಿನಾಚರಣೆ: ಸಿದ್ದರಾಜ ಮಲ್ಕಂಡಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ವತಿಯಿಂದ ಇದೇ ಜು. 30 ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟಕರಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆಗಮಿಸಲಿದ್ದಾರೆ. ರಾಯಚೂರಿನ ಉಪನ್ಯಾಸಕ ಹಾಗೂ ಪ್ರಗತಿಪರ ಚಿಂತಕ ಡಾ ಚಂದ್ರಗಿರೀಶ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಮತ್ತು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯ ಡಾ. ಶಿವರಂಜನ್ ಸತ್ಯಂಪೇಟೆ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಆಕ್ರಂ ಪಾಷಾ, ಬಿಇಓ ಶಶಿಧರ ಬಿರಾದಾರ ಹಾಗೂ ಇನ್ನಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆದ್ದರಿಂದ ಪತ್ರಿಕಾ ಹಿತೈಷಿಗಳು, ಓದುಗರು, ಬರಹಾಗಾರರು, ಪತ್ರಿಕಾ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

