ಪರಿಸರ ಜಾಗೃತಿ ಕಾರ್ಯಕ್ರಮ, ಧರ್ಮಸ್ಥಳ ಸಂಸ್ಥೆಯ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಳ್ಳಲು ಕರೆ
ನಾಗಾವಿ ಎಕ್ಸಪ್ರೆಸ್
ಕಾಳಗಿ: ಪರಿಸರ ರಕ್ಷಣೆ, ಪರಿಸರ ಅಭಿವೃದ್ಧಿಗಾಗಿ ಧರ್ಮಸ್ಥಳ ಸಂಸ್ಥೆಯಿಂದ ಅನೇಕ ಕಾರ್ಯಕ್ರಮಗಳು, ಯೋಜನೆಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲಿದ್ದು ಈ ಕಾರ್ಯಕ್ರಮಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಮುಖ್ಯ ಗುರು ಬಸವರಾಜ್.ಎಚ್ ಕರೆ ನೀಡಿದರು.
ತಾಲೂಕಿನ ತೆಂಗಳಿ ವಲಯದ ಮಾಡಬೂಳ ಕಾರ್ಯಕ್ಷೇತ್ರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಸಸಿಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅರ್ಚನಾ ಮಾತನಾಡಿ, ಸಂಸ್ಥೆ ಕಾರ್ಯಕ್ರಮಗಳಾದ ಮಾಶಾಸನ, ಸ್ವ ಉದ್ಯೋಗ ತರಬೇತಿ, ಮಧ್ಯವರ್ಜನ ಶಿಬಿರ, ಸುಜ್ಞಾನ ನಿಧಿ ಶಿಷ್ಯವೇತನ, ಶುದ್ಧಗಂಗಾ ಘಟಕ, ಮಾಸಾಶನ ವಿತರಣೆ, ನಮ್ಮೂರು ನಮ್ಮ ಕೆರೆ, ಸಿಎಸ್ಸಿ ಕೇಂದ್ರಗಳಲ್ಲಿ ಸಿಗುವಂತಹ ಸೇವೆಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು. ಈ ಸಂದರ್ಭದಲ್ಲಿ ಸಿಎಸ್‌ಸಿ ಸೇವಾದಾರರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

