ಪೂಜ್ಯ ಶ್ರೀ ಡಾ.ಶರಣಬಸವಪ್ಪ ಅಪ್ಪ ಅವರ ನಿಧನಕ್ಕೆ ಬಾಬುರಾವ್ ಚಿಂಚನಸೂರ ಕಂಬನಿ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯುತ್ಕೃಷ್ಟ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದ್ದ, ಕಲಬುರಗಿ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ ಎಂಟನೇ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಡಾ.ಶರಣಬಸವಪ್ಪ ಅಪ್ಪ ಅವರು ಲಿಂಗೈಕ್ಯರಾದ ಸುದ್ಧಿ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ ಎಂದು ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರು ಕಂಬನಿ ಮಿಡಿದಿದ್ದಾರೆ.
ಕಲಬುರಗಿಯ ಭಾವೈಕ್ಯ ಪರಂಪರೆಯನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪೂಜ್ಯ ಡಾ.ಅಪ್ಪಾ ಅವರ ನಿಧನದಿಂದ ನಮ್ಮ ನಾಡು ಒಬ್ಬ ಶ್ರೇಷ್ಠ ಶಿಕ್ಷಣ ಪ್ರೇಮಿ, ಮಹಾದಾಸೋಹಿ, ಧಾರ್ಮಿಕ ಲೋಕದ ಹಿರಿಯರೊಬ್ಬರನ್ನು ಕಳೆದುಕೊಂಡು ಬಡವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲೆಂದು ಪ್ರಾರ್ಥಿಸುವೆ.
