Oplus_0

ಗಂಗಾವತಿಯ ಚನ್ನಬಸವ ಕೊಟಗಿ ಅವರಿಗೆ ಗೌರವ ಡಾಕ್ಟರೇಟ್

ನಾಗಾವಿ ಎಕ್ಸಪ್ರೆಸ್ 

ಗಂಗಾವತಿ: ನಗರದ ನಿವಾಸಿಯಾದ ಚನ್ನಬಸವ ಕೊಟಗಿಯವರು ಒಬ್ಬ ವರದಿಗಾರರಾಗಿ ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಂದ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ ಮತ್ತು ಆರ್ಟ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.

ಚನ್ನಬಸವ ಕೊಟಗಿಯವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ, ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಪ್ರವಾಸಿಗರ ಮಾರ್ಗದರ್ಶಕರಾಗಿ, ಸಂಘಟಕರಾಗಿ, ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ, ಗಣ್ಯವ್ಯಕ್ತಿಗಳ ಆಪ್ತ ಸಹಾಯಕರಾಗಿ ಹತ್ತಾರು ಸೇವೆಗಳನ್ನು ಸಲ್ಲಿಸುತ್ತಾ, ವಿವಿಧ ಖಾಸಗಿ ಟಿ.ವಿ ಚಾನೆಲ್‌ಗಳು ಹಾಗೂ ಪತ್ರಿಕೆಗಳಲ್ಲಿ ಕರ್ತವ್ಯನಿರ್ವಹಿಸಿ, ಪ್ರಸ್ತುತ ಭಾರತ ಸರ್ಕಾರದ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ ಮತ್ತು ಆರ್ಟ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.

ಅವರಿಗೆ ಸೆಪ್ಟೆಂಬರ್ 13 ರಂದು ಫರಿದಾಬಾದ್‌ನ ದಿ ಕ್ಯಾಸ್ಟಲ್ ಆಫ್ ಆರ್ಟ್ ಥಿಯೇಟರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.

ಸದರಿ ವಿಶ್ವವಿದ್ಯಾಲಯದ ನಿರ್ದೇಶಕರು, ಡೀನ್, ರೀಜಿಸ್ಟರ್ ಹಾಗೂ ಸಂಸ್ಥೆಯ ಸಂಪರ್ಕ ಅಧಿಕಾರಿ ಆಶಾ ಅವರಿಗೆ ಚನ್ನಬಸವ ಕೊಟಗಿಯವರು ಕೃತಜ್ಞತೆ ಸಲ್ಲಿಸಿದ್ದಾರೆ. ಇವರಿಗೆ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕರು, ಕಲಾವಿದರು, ಪತ್ರಕರ್ತರು, ಸಾಹಿತಿಗಳು, ಸಂಘ-ಸಂಸ್ಥೆಗಳು ಅಭಿನಂದನೆಗಳನ್ನು ಸಲ್ಲಿಸಿವೆ.

Spread the love

Leave a Reply

Your email address will not be published. Required fields are marked *

error: Content is protected !!